ADVERTISEMENT

ತಂತ್ರಜ್ಞಾನದಲ್ಲಿ ಸುಧಾರಣೆ ಪತ್ತೆ ಹಚ್ಚುವ ಸಾಧನ ಅಭಿವೃದ್ಧಿ

​ಪ್ರಜಾವಾಣಿ ವಾರ್ತೆ
Published 28 ಅಕ್ಟೋಬರ್ 2021, 15:12 IST
Last Updated 28 ಅಕ್ಟೋಬರ್ 2021, 15:12 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೋಸ್ಟನ್‌, ಅಮೆರಿಕ: ಮೆಸಾಚುಸೆಟ್ಸ್‌ ಇನ್ಸ್‌ಟಿಟ್ಯೂಟ್‌ ಆಫ್‌ ಟೆಕ್ನಾಲಜಿಯಲ್ಲಿ (ಎಂಐಟಿ) ಕಾರ್ಯನಿರ್ವಹಿಸುವ ಭಾರತ ಮೂಲದ ಸಂಶೋಧಕರೊಬ್ಬರ ನೇತೃತ್ವದ ತಂಡವು ಕೃತಕ ಬುದ್ಧಿಮತ್ತೆ (ಎಐ) ಆಧಾರಿತ ಸಾಧನವನ್ನು ಅಭಿವೃದ್ಧಿಪಡಿಸಿದೆ.

ಯಾವುದೇ ತಂತ್ರಜ್ಞಾನವು ಎಷ್ಟು ವೇಗವಾಗಿ ಸುಧಾರಿಸುತ್ತಿದೆ ಎಂಬುದನ್ನು ಈ ಸಾಧನ ಊಹಿಸುತ್ತದೆ. ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಗಳಿಗೆ ಇದು ಸಹಾಯಕವಾಗಿದೆ ಎಂದು ಹೇಳಲಾಗಿದೆ. ‘ರಿಸರ್ಚ್ ಪಾಲಿಸಿ’ ನಿಯತಕಾಲಿಕದಲ್ಲಿ ಈ ಕುರಿತ ಸಂಶೋಧನಾ ವರದಿ ಪ್ರಕಟವಾಗಿದೆ.

‘ನಾವು ಎಲ್ಲಾ ಕಾಲದ ತಂತ್ರಜ್ಞಾನಗಳ ನಡುವೆ ಆಯ್ಕೆ ಮಾಡಿಕೊಳ್ಳಬೇಕು. ಕೆಲವು ತಂತ್ರಜ್ಞಾನಗಳು ಪ್ರಮುಖವಾಗಿ ಹೆಚ್ಚಿನ ಗಮನ ಸೆಳೆಯುತ್ತವೆ’ ಎಂದು ಎಂಐಟಿಯ ಅಧ್ಯಯನದ ಪ್ರಮುಖ ಸಂಶೋಧಕ ಅನುರಾಗ್‌ ಸಿಂಗ್‌ ಹೇಳಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.