ADVERTISEMENT

ಹೊಸ ಸ್ಕಾರ್ಪಿಯೊ ಬಿಡುಗಡೆ ಯಾವಾಗ ಎಂದ ಗ್ರಾಹಕ: ಆನಂದ್ ಮಹೀಂದ್ರಾ ಉತ್ತರ ಹೀಗಿತ್ತು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 6 ಮೇ 2022, 11:22 IST
Last Updated 6 ಮೇ 2022, 11:22 IST
ಆನಂದ್‌ ಮಹೀಂದ್ರಾ
ಆನಂದ್‌ ಮಹೀಂದ್ರಾ    

ನವದೆಹಲಿ: ಎಸ್‌ಯುವಿ ಸ್ಕಾರ್ಪಿಯೊ ಕಾರಿನ ಹೊಸ ಆವೃತ್ತಿ ಬಿಡುಗಡೆ ದಿನಾಂಕದ ಬಗ್ಗೆ ಗ್ರಾಹಕರೊಬ್ಬರು ಕೇಳಿದ ಪ್ರಶ್ನೆಗೆ ಮಹೀಂದ್ರಾ ಗ್ರೂಪ್‌ ಅಧ್ಯಕ್ಷ ಆನಂದ್‌ ಮಹೀಂದ್ರಾ ಹಾಸ್ಯಮಯವಾಗಿ ಉತ್ತರಿಸುವ ಮೂಲಕ ಗಮನ ಸೆಳೆದಿದ್ದಾರೆ.

‘ಸರ್, ದಯವಿಟ್ಟು ಸ್ಕಾರ್ಪಿಯೊ ಯಾವ ದಿನಾಂಕದಂದು ಬಿಡುಗಡೆಯಾಗಲಿದೆ ಎಂದು ತಿಳಿಸಿ. ಏಕೆಂದರೆ ನಾವು ಅದಕ್ಕಾಗಿ ಕಾಯುತ್ತಿದ್ದೇವೆ’ ಎಂದು ಐಎನ್‌ಸಿ ಪ್ರಾಜೆಕ್ಟ್‌ ಮೆಕರ್ಸ್‌ ಹೆಸರಿನ ಟ್ವಿಟರ್‌ ಬಳಕೆದಾರರೊಬ್ಬರು ಪ್ರಶ್ನಿಸಿದ್ದರು.

ಇದಕ್ಕೆ ಪ್ರತಿಕ್ರಿಯಿಸಿರುವ ಆನಂದ್ ಮಹೀಂದ್ರಾ, ‘ಶ್ಶ್, ನಾನು ನಿಮಗೆ ಹೇಳಿದರೆ, ನನ್ನನ್ನು ಕೆಲಸದಿಂದ ತೆಗೆದುಹಾಕಲಾಗುತ್ತದೆ ... ಆದರೆ, ನಾನು ಇಷ್ಟು ಮಾತ್ರ ಹೇಳಬಲ್ಲೆ... ನಾನು ನಿಮ್ಮಂತೆಯೇ ಉತ್ಸುಕನಾಗಿ ಕಾಯುತ್ತಿದ್ದೇನೆ...’ ಎಂದಿದ್ದಾರೆ.

ADVERTISEMENT

ಸಾಮಾಜಿಕ ಜಾಲತಾಣಗಳಲ್ಲಿ ಸದಾ ಸಕ್ರಿಯರಾಗಿರುವ ಆನಂದ್ ಮಹೀಂದ್ರಾ, ಜನರೊಂದಿಗೆ ತೊಡಗಿಸಿಕೊಳ್ಳಲು ಇಷ್ಟಪಡುತ್ತಾರೆ. ಸಾರ್ವಜನಿಕರ ಪ್ರಶ್ನೆಗಳಿಗೆ ಉತ್ತರಿಸುವ ಜೊತೆಗೆ ಅವರೊಂದಿಗೆ ಆಸಕ್ತಿದಾಯಕ ವಿಷಯಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

ಆನಂದ್ ಮಹೀಂದ್ರಾ ಅವರು ಗ್ರಾಹಕರೊಬ್ಬರು ಕೇಳಿದ ಪ್ರಶ್ನೆಗೆ ನಿರ್ದಿಷ್ಟ ಉತ್ತರ ನೀಡದಿದ್ದರೂ ಅನೇಕರು ಅವರ ಪ್ರತಿಕ್ರಿಯೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕೆಲವರು ‘ಹಾಸ್ಯಮಯ’ ಎಂದು ಹೇಳಿಕೊಂಡಿದ್ದಾರೆ.

‘ಸರ್, ನಾನು ನೋಡಿದ ಅತ್ಯುತ್ತಮ ಹಾಸ್ಯಮಯ ಟ್ವೀಟ್ ಇದು. ‘ಶ್ಶ್, ಹೇಳಿದರೆ ಕೆಲಸದಿಂದ ತೆಗೆದು ಹಾಕುತ್ತೇನೆ’ ಎಂದು ವ್ಯಕ್ತಿಯೊಬ್ಬರು ಪ್ರತಿಕ್ರಿಯಿಸಿದ್ದಾರೆ.

ಹೊಸ ಸ್ಕಾರ್ಪಿಯೊ ಬಿಡುಗಡೆಕುರಿತು ಕಂಪನಿಯಾವುದೇ ನಿರ್ದಿಷ್ಟ ದಿನಾಂಕವನ್ನು ಘೋಷಿಸದಿದ್ದರೂ, ಜೂನ್‌ನಲ್ಲಿ ಸ್ಕಾರ್ಪಿಯೊ 20ನೇ ವಾರ್ಷಿಕೋತ್ಸವದ ಅಂಗವಾಗಿ ಬಿಡುಗಡೆಯಾಗಲಿದೆ ಎನ್ನುವುದು ಗ್ರಾಹಕರ ನಿರೀಕ್ಷೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.