ADVERTISEMENT

ಅರುಣಾಚಲ ಪ್ರದೇಶ; ವಾಹನಗಳು ಸಂಚರಿಸುತ್ತಿರುವಾಗಲೇ ಹೆದ್ದಾರಿ ಕುಸಿತ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 6 ಜೂನ್ 2021, 2:21 IST
Last Updated 6 ಜೂನ್ 2021, 2:21 IST
ಟ್ವಿಟರ್ ಸ್ಕ್ರೀನ್‌ಶಾಟ್
ಟ್ವಿಟರ್ ಸ್ಕ್ರೀನ್‌ಶಾಟ್   

ಇಟಾನಗರ: ಅರುಣಾಚಲ ಪ್ರದೇಶದಲ್ಲಿ ಇತ್ತೀಚೆಗೆ ಭಾರಿ ಮಳೆ ಸುರಿದಿತ್ತು. ಈ ಮಧ್ಯೆ ವಾಹನ ಸಂಚರಿಸುತ್ತಿರುವಾಗಲೇ ರಾಷ್ಟ್ರೀಯ ಹೆದ್ದಾರಿಯ ಒಂದು ಭಾಗ ಕುಸಿದಿರುವ ಭಯಾನಕ ಘಟನೆವರದಿಯಾಗಿದೆ.

ಈ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಇಟಾನಗರದ ಗಾಂಧಿ ಪಾರ್ಕ್ ಡಿ-ಸೆಕ್ಟರ್ ಬಳಿ ರಾಷ್ಟ್ರೀಯ ಹೆದ್ದಾರಿ-415ರ ಒಂದು ಭಾಗ ಸೇರಿದಂತೆ ರಸ್ತೆಯ ತಡೆಗೋಡೆ ಸಂಪೂರ್ಣವಾಗಿ ಕುಸಿಯುತ್ತದೆ.

ಹೆದ್ದಾರಿಯ ಇನ್ನೊಂದು ಭಾಗದಲ್ಲಿ ವಾಹನಗಳು ಸಂಚರಿಸುತ್ತಿದ್ದವು. ಆದರೆ ಯಾವುದೇ ಅಪಾಯ ಎದುರಾಗಿಲ್ಲ. ಈ ವಿಡಿಯೊ ಕ್ಯಾಮೆರಾ ಕಣ್ಣುಗಳಲ್ಲಿ ಸೆರೆಯಾಗಿವೆ.

ನಹರ್ಲಾಗುನ್ ಮತ್ತು ಇಟಾನಗರವನ್ನು ಸಂಪರ್ಕಿಸುವ ಹೆದ್ದಾರಿ ನಿರ್ಮಾಣ ಕಾರ್ಯವು ಇತ್ತೀಚೆಗಷ್ಟೇ ಪೂರ್ಣಗೊಂಡಿತ್ತು. ಈ ಘಟನೆ ಬಳಿಕ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿಲುಗಡೆಗೊಳಿಸಲಾಗಿತ್ತು.

ಕಳಪೆ ಗಾಮಗಾರಿ ಬಗ್ಗೆಯೂ ಸ್ಥಳೀಯರಿಂದ ಆಕ್ರೋಶ ವ್ಯಕ್ತವಾಗಿದ್ದು, ತನಿಖೆಗೆ ಆಗ್ರಹಿಸಿದ್ದಾರೆ.

ಭಾರಿ ಮಳೆಯ ಹಿನ್ನೆಲೆಯಲ್ಲಿ ಇಟಾನಗರ ಹಾಗೂ ಅನೇಕ ತಗ್ಗು ಪ್ರದೇಶಗಳುಜಲಾವೃತಗೊಂಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.