
ರೈಲು ನಿಲ್ದಾಣದ ಹಳಿಯ ಮೇಲೆಯೇ ಥಾರ್ ಕಾರು ಚಲಾಯಿಸಿದ!
ಬೆಂಗಳೂರು: ರೈಲು ನಿಲ್ದಾಣದ ರೈಲು ಹಳಿಯ ಮೇಲೆಯೇ ವ್ಯಕ್ತಿಯೊಬ್ಬ ತನ್ನ ಎಸ್‌ಯುವಿ ಮಹೀಂದ್ರಾ ಥಾರ್ ಕಾರನ್ನು ಚಲಾಯಿಸಲು ಹೋಗಿ ಪೊಲೀಸರ ಹಾಗೂ ಸಾರ್ವಜನಿಕರ ತೀವ್ರ ಕೆಂಗಣ್ಣಿಗೆ ಗುರಿಯಾಗಿದ್ದಾನೆ.
ಈ ಘಟನೆ ಈಶಾನ್ಯ ರಾಜ್ಯ ನಾಗಾಲ್ಯಾಂಡ್‌ನಲ್ಲಿ ಡಿ. 16ರ ರಾತ್ರಿ ನಡೆದಿದೆ ಎಂದು ವರದಿಗಳು ಹೇಳಿವೆ. ಘಟನೆಗೆ ಸಂಬಂಧಿಸಿದ ವಿಡಿಯೊಗಳು ಹರಿದಾಡಿವೆ. ನಾಗಾಲ್ಯಾಂಡ್‌ನ ಧಿಮಾಪುರ ರೈಲು ನಿಲ್ದಾಣದ (dimapur railway station) ಸಕ್ರಿಯ ಫ್ಲಾಟ್‌ಫಾರ್ಮ್ ಹಳಿಯಲ್ಲಿ ಈ ಘಟನೆ ನಡೆದಿದೆ.
ಘಟನೆಗೆ ಸಂಬಂಧಿಸಿದಂತೆ ಕಾರು (NL-01/CA-8181) ಚಾಲಕ 65 ವರ್ಷದ ವ್ಯಕ್ತಿಯನ್ನು ರೈಲ್ವೆ ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ.
ತಕ್ಷಣವೇ ಕಾರನ್ನು ಹಾಗೂ ಚಾಲಕನನ್ನು ಸುರಕ್ಷಿತವಾಗಿ ಹೊರತೆಗೆದಿದ್ದು, ಕಾರು ಹಳಿಗೆ ಬಂದಿದ್ದು ಹೇಗೆ ಎಂಬುದರ ಬಗ್ಗೆ ತನಿಖೆ ನಡೆಯುತ್ತಿದ್ದು, ಪ್ರಾಥಮಿಕ ವಿಚಾರಣೆಯಲ್ಲಿ ಕಾರು ಚಾಲಕ ಪಾನಮತ್ತನಾಗಿದ್ದ ಎಂದು ತಿಳಿದು ಬಂದಿದೆ.
ರೈಲು ಪ್ರಯಾಣದ ಸುರಕ್ಷತೆ ಬಗ್ಗೆ ಈ ವಿಡಿಯೊ ಹಂಚಿಕೊಂಡು ಹಲವರು ಆತಂಕ ವ್ಯಕ್ತಪಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.