

ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ ಅವರ ಸೋದರ ಸಂಬಂಧಿ ವಿವಾಹ ಸಂಭ್ರಮದಲ್ಲಿ ಇನ್ಫೊಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾ ಮೂರ್ತಿ ಅವರು ಹೆಜ್ಜೆ ಹಾಕಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆದ ಕಿರಣ್ ಮಜುಂದಾರ್ ಅವರ ಸೋದರ ಸಂಬಂಧಿ ಮದುವೆಯಲ್ಲಿ ವರನ ಮೆರವಣಿಗೆ ವೇಳೆ, ಪಂಜಾಬಿ ಡೋಲ್ ನಾದಕ್ಕೆ ಕಿರಣ್ ಮಜುಂದಾರ್ ಜತೆ ಸುಧಾ ಮೂರ್ತಿ ಅವರು ಹೆಜ್ಜೆ ಹಾಕಿದ್ದಾರೆ.
ರಾಜ್ಯಸಭಾ ಸಂಸದೆ ಸುಧಾ ಮೂರ್ತಿ ಅವರ ನೃತ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ಅನೇಕರು ಅಭಿಪ್ರಾಯ ಹಂಚಿಕೊಂಡಿದ್ದಾರೆ.
ಸುಧಾ ಮೂರ್ತಿ ಅವರು ಶಿಕ್ಷಣ ಮತ್ತು ಮನೋರಂಜನೆ ಎರಡಕ್ಕೂ ಒತ್ತು ನೀಡುತ್ತಾರೆ. ಸಮಾಜ ಸೇವೆ ಕಾರ್ಯದಲ್ಲೂ ಗುರುತಿಸಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.