ಮುಂಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಪಾರ್ಕಿಂಗ್ ಪ್ರದೇಶದಲ್ಲಿ ಮಹಿಳೆಯೊಬ್ಬರು ಓಲಾ ಕ್ಯಾಬ್ ಚಾಲಕನ ಮೇಲೆ ಹಲ್ಲೆ ಮಾಡಿರುವ ಘಟನೆ ವರದಿಯಾಗಿದೆ.
ಬೆಂಗಳೂರು: ಮುಂಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಪಾರ್ಕಿಂಗ್ ಪ್ರದೇಶದಲ್ಲಿ ಮಹಿಳೆಯೊಬ್ಬರು ಓಲಾ ಕ್ಯಾಬ್ ಚಾಲಕನ ಮೇಲೆ ಹಿಗ್ಗಾಮುಗ್ಗಾ ಹಲ್ಲೆ ಮಾಡಿರುವ ಘಟನೆ ವರದಿಯಾಗಿದೆ.
ವಿಮಾನ ಹೊರಡುವ ಸರಿಯಾದ ವೇಳೆಗೆ ತನ್ನನ್ನು ವಿಮಾನ ನಿಲ್ದಾಣಕ್ಕೆ ತಲುಪಿಸಲಿಲ್ಲ ಎಂದು ಕೋಪಗೊಂಡು ಮಹಿಳೆ ಕ್ಯಾಬ್ ಚಾಲಕನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಈ ಕುರಿತ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದೆ. ಆದರೆ ಈ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ. ಈ ರೀತಿಯ ಘಟನೆಗಳು ನಡೆದಾಗ ಸಂಬಂಧಿಸಿದ ಪೊಲೀಸ್ ಠಾಣೆಗೆ ಮಾಹಿತಿ ನೀಡಿ ಎಂದು ಮುಂಬೈ ಟ್ರಾಫಿಕ್ ಪೊಲೀಸರು ಎಕ್ಸ್‌ನಲ್ಲಿ ತಿಳಿಸಿದ್ದಾರೆ.
ಮಹಿಳೆ, ಕ್ಯಾಬ್ ಚಾಲಕನಿಗೆ ಕೆಲವು ಜನರ ಎದುರೇ ಕಪಾಳಕ್ಕೆ ಹೊಡೆದು ಒದ್ದು ಹಲ್ಲೆ ಮಾಡುತ್ತಾರೆ. ಚಾಲಕ ಅವರಿಂದ ಬಿಡಿಸಿಕೊಳ್ಳಲು ನೋಡುತ್ತಾನೆ.
ವಿಡಿಯೊದಲ್ಲಿನ ಮಹಿಳೆಯ ವರ್ತನೆಯನ್ನು ಹಲವರು ಖಂಡಿಸಿದ್ದಾರೆ. ಕೌನ್ಸಿಲ್ ಫಾರ್ ಮೆನ್ ಅಫೇರ್ ಸಂಘಟನೆ ವಿಡಿಯೊ ಹಂಚಿಕೊಂಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.