ವಿಮಾನಕ್ಕೆ ಬೆಂಕಿ– ರೆಕ್ಕೆಯ ಮೇಲೆ ನಿಂತು ಪ್ರಾಣ ಉಳಿಸಿಕೊಂಡ ಪ್ರಯಾಣಿಕರು
ಬೆಂಗಳೂರು: ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರಿದ್ದ ವಿಮಾನವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದರಿಂದ, ಆ ವಿಮಾನದ ರೆಕ್ಕೆಯ ಮೇಲೆ ನಿಂತು ಪ್ರಯಾಣಿಕರು ಪ್ರಾಣ ಉಳಿಸಿಕೊಂಡಿರುವ ಘಟನೆ ಅಮೆರಿಕದಲ್ಲಿ ಗುರುವಾರ ನಡೆದಿದೆ.
ಅಮೆರಿಕದ ಟೆಕ್ಸಾಸ್‌ನ ಡೆನ್ವರ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ.
ಅಮೆರಿಕನ್ ಏರ್‌ಲೈನ್ಸ್‌ನ ವಿಮಾನವು (American Airlines 737-800) ಮಧ್ಯಾಹ್ನದ ಗುರುವಾರ ಕೊಲರಾಡೊಕ್ಕೆ ಹೊರಡಲು ಅಣಿಯಾಗಿತ್ತು. ಆದರೆ, ಆ ಸಮಯದಲ್ಲಿ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡು ದಟ್ಟ ಹೊಗೆ ಆವರಿಸಿತ್ತು. ಕೂಡಲೇ ತುರ್ತು ದ್ವಾರದ ಮೂಲಕ ಪ್ರಯಾಣಿಕರು ವಿಮಾನದ ರೆಕ್ಕೆಯ ಮೇಲೆ ಬಂದು ನಿಂತು ಪ್ರಾಣ ಉಳಿಸಿಕೊಂಡಿದ್ದಾರೆ.
ರಕ್ಷಣಾ ದಳದವರು ರೆಕ್ಕೆಯ ಮೇಲೆ ನಿಂತಿದ್ದ ಪ್ರಯಾಣಿಕರನ್ನು ಹಾಗೂ ಸಿಬ್ಬಂದಿಯನ್ನು ರಕ್ಷಿಸಿದ್ದಾರೆ. ಯಾವುದೇ ಸಾವು ಸಂಭವಿಸಿಲ್ಲ. 12 ಜನಕ್ಕೆ ಸಣ್ಣಪುಟ್ಟ ಗಾಯಗಳಾಗಿದ್ದು ಅವರನ್ನು ಸನಿಹದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಬಿಬಿಸಿ ವೆಬ್‌ಸೈಟ್ ವರದಿ ಮಾಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.