Video: ಹೈದರಾಬಾದ್ ರಿಂಗ್ ರಸ್ತೆಯಲ್ಲಿ ಅಪಾಯಕಾರಿ ಸ್ಟಂಟ್ ಶೋ– ಇಬ್ಬರ ಬಂಧನ
ಹೈದರಾಬಾದ್: ಹೈದರಾಬಾದ್ ಹೊರವಲಯದ ರಿಂಗ್‌ರೋಡ್‌ನಲ್ಲಿ ಎರಡು ಕಾರುಗಳಲ್ಲಿ ಅಪಾಯಕಾರಿ ಸ್ಟಂಟ್ ಮಾಡಿದ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ.
ಘಟನೆ ಕುರಿತ ಸಿಟಿಟಿವಿಯಲ್ಲಿ ದಾಖಲಾದ ವಿಡಿಯೊ ಹರಿದಾಡಿದ್ದು ಯುವಕರು ತೀವ್ರ ಟೀಕೆಗೆ ಗುರಿಯಾಗಿದ್ದಾರೆ.
ನಂಬರ್ ಪ್ಲೇಟ್‌ಗಳನ್ನು ತೆಗೆದು ಈ ಸ್ಟಂಟ್ ಪ್ರದರ್ಶನ ಮಾಡಿದ್ದಾರೆ. ಅದಾಗ್ಯೂ ಆರೋಪಿಗಳನ್ನು ಪತ್ತೆ ಹಚ್ಚಲಾಗಿದೆ. ಫೆಬ್ರುವರಿ 9 ರಂದು ಶಂಶಾಬಾದ್ ಬಳಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ.
ಈ ರಿಂಗ್‌ರೋಡ್‌ನಲ್ಲಿ ಹೆಚ್ಚು ವಾಹನ ದಟ್ಟಣೆ ಇರುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.