ಬೆಂಗಳೂರು: ಪಿಎಸ್‌ಐ ಅಕ್ರಮ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿ ಆಗಿದ್ದ ಅಮ್ರಿತ್ ಪೌಲ್ ಅವರನ್ನು ಎರಡು ದಿನ ವಿಚಾರಣೆ ಮಾಡಿರುವ ಸಿಐಡಿ ಅಧಿಕಾರಿಗಳು, ಮೂರನೇ ಬಾರಿ ಮತ್ತೊಮ್ಮೆ ವಿಚಾರಣೆ ಮಾಡಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.
‘ಬುಧವಾರ, ಗುರುವಾರ ವಿಚಾರಣೆಗೆ ಹಾಜರಾಗಿದ್ದ ಪೌಲ್ ಕೆಲ ಪ್ರಶ್ನೆಗಳಿಗೆ ಲಿಖಿತ ಉತ್ತರ ನೀಡಿದ್ದಾರೆ. ಅದರ ಪರಿಶೀಲನೆ ನಡೆಸಲಾಗುತ್ತಿದ್ದು, ಮತ್ತಷ್ಟು ಪ್ರಶ್ನೆಗಳನ್ನು ಸಿದ್ಧಪಡಿಸಿ ಪೌಲ್ ಅವರನ್ನು ವಿಚಾರಣೆಗೆ ಕರೆಯಬೇಕಿದೆ. ನೇಮಕಾತಿ ವಿಭಾಗದ ಡಿವೈಎಸ್ಪಿ ಶಾಂತಕುಮಾರ್ ಹಾಗೂ ಇತರೆ ನೌಕರರ ಹೇಳಿಕೆಯ ಜೊತೆ ಪೌಲ್ ಹೇಳಿಕೆ ಹೋಲಿಕೆ ಮಾಡಲಾಗುತ್ತಿದೆ. ತಮ್ಮದೇನೂ ತಪ್ಪಿಲ್ಲವೆಂದು ಎಡಿಜಿಪಿ ಹೇಳುತ್ತಿದ್ದಾರೆ. ಕೆಲ ಪುರಾವೆಗಳು ಅವರ ಮೇಲೆ ಅನುಮಾನ ಬರುವಂತಿದೆ. ಇನ್ನೊಮ್ಮೆ ವಿಚಾರಣೆ ನಡೆಸಿದ ಬಳಿಕವೇ ಪೌಲ್ ಪಾತ್ರದ ಬಗ್ಗೆ ತಿಳಿಯಲಿದೆ’ ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.