ADVERTISEMENT

ರಿಯಲ್‌ಮಿ C25Y ಸ್ಮಾರ್ಟ್‌ಫೋನ್ ಬಿಡುಗಡೆ: ಬೆಲೆ ಮತ್ತು ವಿವರ ಇಲ್ಲಿದೆ..

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 16 ಸೆಪ್ಟೆಂಬರ್ 2021, 11:44 IST
Last Updated 16 ಸೆಪ್ಟೆಂಬರ್ 2021, 11:44 IST
ರಿಯಲ್‌ಮಿ ಹೊಸ ಸ್ಮಾರ್ಟ್‌ಫೋನ್ ಬಿಡುಗಡೆ
ರಿಯಲ್‌ಮಿ ಹೊಸ ಸ್ಮಾರ್ಟ್‌ಫೋನ್ ಬಿಡುಗಡೆ   

ಬೆಂಗಳೂರು: ದೇಶದ ಮಾರುಕಟ್ಟೆಗೆ ರಿಯಲ್‌ಮಿ ಹೊಸ ಸ್ಮಾರ್ಟ್‌ಫೋನ್ ಪರಿಚಯಿಸಿದೆ.

ರಿಯಲ್‌ಮಿ ಸಿ ಸರಣಿಯಲ್ಲಿ ಹೊಸದಾಗಿ ಸಿ25ವೈ ಬಿಡುಗಡೆಯಾಗಿದ್ದು, 50 ಮೆಗಾಪಿಕ್ಸೆಲ್ ಕ್ಯಾಮರಾ ಹೊಂದಿದೆ.

ಬೆಲೆ ವಿವರ

ADVERTISEMENT

ನೂತನ ರಿಯಲ್‌ಮಿ C25Y, 4 GB + 64 GB ಮಾದರಿಗೆ ದೇಶದಲ್ಲಿ ₹10,999 ದರ ಹೊಂದಿದೆ. ಉಳಿದಂತೆ, 4 GB + 128 GB ಆವೃತ್ತಿಗೆ ₹11,999 ದರವಿದೆ.

ಹಿಂಭಾಗದಲ್ಲಿ 50 ಮೆಗಾಪಿಕ್ಸೆಲ್ ಜತೆಗೆ 2+2 ಮೆಗಾಪಿಕ್ಸೆಲ್ ಕ್ಯಾಮರಾ, 8 ಮೆಗಾಪಿಕ್ಸೆಲ್ ಸೆಲ್ಫಿ ಕೂಡ ಇದರಲ್ಲಿದೆ.

ಜತೆಗೆ 5000mAh ಬ್ಯಾಟರಿ ಬೆಂಬಲ, 18W ಫಾಸ್ಟ್ ಚಾರ್ಜಿಂಗ್ ಕೂಡ ಹೊಸ ರಿಯಲ್‌ಮಿ ಫೋನ್‌ನಲ್ಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.