ADVERTISEMENT

ಸರ್ಚ್ ಎಂಜಿನ್‌ನಲ್ಲಿ ಕನ್ನಡಕ್ಕೆ ಕೆಟ್ಟ ಭಾಷೆಯ ಪಟ್ಟಿ: ಕ್ಷಮೆಯಾಚಿಸಿದ ಗೂಗಲ್

​ಪ್ರಜಾವಾಣಿ ವಾರ್ತೆ
Published 3 ಜೂನ್ 2021, 16:35 IST
Last Updated 3 ಜೂನ್ 2021, 16:35 IST
   

ಬೆಂಗಳೂರು: ಕನ್ನಡಿಗರ ಭಾವನೆಗಳಿಗೆ ಧಕ್ಕೆ ತಂದಿರುವ ಗೂಗಲ್ ಕ್ಷಮೆಯಾಚಿಸಿದೆ. ಭಾರತದ ಅತಿ ಕೆಟ್ಟ ಭಾಷೆ ಎಂದು ಗೂಗಲ್‌ನಲ್ಲಿ ಹುಡುಕಿದ್ದರೆ ಕನ್ನಡ ಎಂದು ಉತ್ತರ ಬರುತ್ತಿತ್ತು. ಇದು ಕನ್ನಡ ಅಭಿಮಾನಿಗಳ ಭಾರಿ ಆಕ್ರೋಶಕ್ಕೆ ಕಾರಣವಾಗಿತ್ತು.

ಕೊನೆಗೂ ಕನ್ನಡಿಗರ ಸ್ವಾಭಿಮಾನದ ಅಲೆಗೆ ಬೆದರಿರುವ ಗೂಗಲ್ ಇಂಡಿಯಾ, ಅಧಿಕೃತ ಪ್ರಕಟಣೆಯಲ್ಲಿ ಕ್ಷಮೆಯಾಚನೆ ನಡೆಸಿದೆ.

ADVERTISEMENT

"ಹುಡುಕುವುದು ಯಾವಾಗಲೂ ಪರಿಪೂರ್ಣವಾಗಿರುವುದಿಲ್ಲ. ಕೆಲವೊಮ್ಮೆ, ಇಂಟರ್‌ನೆಟ್‌ನಲ್ಲಿ ನಿರ್ದಿಷ್ಟ ಹುಡುಕಾಟಗಳಿಗೆ ಬರುವ ಫಲಿತಾಂಶಗಳು ಆಶ್ಚರ್ಯವನ್ನುಂಟು ಮಾಡುತ್ತವೆ. ಇದು ಸೂಕ್ತವಲ್ಲ ಎಂಬುದು ನಮಗೆ ಗೊತ್ತು. ಆದರೆ ಯಾವುದೇ ಒಂದು ಸಮಸ್ಯೆ ಎದುರಾದಾಗ ಮತ್ತು ನಮ್ಮ ಗಮನಕ್ಕೆ ಬಂದಾಗ ನಾವು ಕ್ಷಿಪ್ರವಾಗಿ ಸಮರ್ಪಕ ಕ್ರಮ ಕೈಗೊಳ್ಳುತ್ತೇವೆ. ನಮ್ಮ ಅಲ್ಗೊರಿಧಂ ಅನ್ನು ಸುಧಾರಣೆ ಮಾಡುವ ನಿಟ್ಟಿನಲ್ಲಿ ಸದಾ ಕ್ರಿಯಾಶೀಲವಾಗಿರುವುದನ್ನು ಮುಂದುರಿಸಿದ್ದೇವೆ. ತಪ್ಪು ಅರ್ಥ ಬಂದಿರುವುದಕ್ಕೆ ಮತ್ತು ಯಾವುದೇ ಭಾವನೆಗಳಿಗೆ ಧಕ್ಕೆಯಾಗಿದ್ದರೆ ನಾವು ಕ್ಷಮೆಯಾಚಿಸುತ್ತಿದ್ದೇವೆ" ಎಂದು ಗೂಗಲ್ ಇಂಡಿಯಾ ಪ್ರಕಟಣೆಯಲ್ಲಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.