ADVERTISEMENT

ಬಿಎಸ್‌ಎನ್‌ಎಲ್ ಖಾಸಗೀಕರಣ ಮಾಡುವುದಿಲ್ಲ: ಕೇಂದ್ರ ಸರ್ಕಾರ

ಪಿಟಿಐ
Published 17 ಮಾರ್ಚ್ 2021, 16:44 IST
Last Updated 17 ಮಾರ್ಚ್ 2021, 16:44 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ಸರ್ಕಾರಿ ಸ್ವಾಮ್ಯದ ಭಾರತ ಸಂಚಾರ ನಿಗಮ ನಿಯಮಿತ (ಬಿಎಸ್ಎನ್ಎಲ್) ಅನ್ನು ಖಾಸಗೀಕರಣಗೊಳಿಸುವ ಯಾವುದೇ ಪ್ರಸ್ತಾಪ ಕೇಂದ್ರದ ಮುಂದಿಲ್ಲ ಎಂದು ಸರ್ಕಾರ ಹೇಳಿದೆ.

ಸಂವಹನ ಖಾತೆ ರಾಜ್ಯ ಸಚಿವ ಸಂಜಯ್ ಧೋತ್ರೆ ಲೋಕಸಭೆಗೆ ನೀಡಿರುವ ಲಿಖಿತ ಉತ್ತರದಲ್ಲಿ ಈ ವಿಚಾರ ಸ್ಪಷ್ಟಪಡಿಸಿದ್ದಾರೆ.

4G ಸೇವೆಯಲ್ಲಿ ಪಾಲ್ಗೊಳ್ಳಲು ಬಯಸುವ ಭಾರತೀಯ ಕಂಪನಿಗಳಿಂದ ಬಿಎಸ್ಎನ್ಎಲ್ ಅರ್ಜಿ ಆಹ್ವಾನಿಸಿದೆ. ಮುಂದಿನ 18-24 ತಿಂಗಳ ಅವಧಿಯಲ್ಲಿ 4G ಸೇವೆ ವಿಸ್ತರಣೆಯನ್ನು ಪೂರ್ಣಗೊಳಿಸಲಾಗುತ್ತದೆ ಎಂದು ಧೋತ್ರೆ ತಿಳಿಸಿದ್ದಾರೆ.

ADVERTISEMENT

ಟೆಂಡರ್ ಮತ್ತು ಉಪಕರಣಗಳ ಪೂರೈಕೆ, ಅಳವಡಿಕೆಯಲ್ಲಿ ಕೇಂದ್ರದ ನಿಯಮಾವಳಿ ಅನ್ವಯ ಬಿಎಸ್ಎನ್ಎಲ್ ನಡೆದುಕೊಳ್ಳಲಿದೆ ಎಂದು ಧೋತ್ರೆ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.