ಇಂದೋರ್: ಮಧ್ಯಪ್ರದೇಶದ ಇಂದೋರ್ನಲ್ಲಿ ರಸ್ತೆ ಮಧ್ಯೆ ಡ್ಯಾನ್ಸ್ ಮಾಡಿದ್ದ ಯುವತಿಯೊಬ್ಬರು ಇದೀಗ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಇಲ್ಲಿನ ಸರ್ಕಲ್ವೊಂದರಲ್ಲಿಟಾಫ್ರಿಕ್ ಸಿಗ್ನಲ್ ಕೆಂಪು ಬಣ್ಣ ತೋರಿಸಿದ ಕೂಡಲೇ ಜೀಬ್ರಾ ಕ್ರಾಸಿಂಗ್ನಲ್ಲಿ ಡ್ಯಾನ್ಸ್ ಮಾಡಿದ್ದಾರೆ. 4 ದಿನಗಳ ಹಿಂದೆ ನೃತ್ಯ ಮಾಡಿದ ವಿಡಿಯೊವನ್ನು ತಮ್ಮ ಸಾಮಾಜಿಕ ಜಾಲತಾಣ ಇನ್ಸ್ಟಾದಲ್ಲಿ ಪ್ರಕಟಿಸಿದ್ದಾರೆ.
ಈ ವಿಡಿಯೊ ಈಗ ವೈರಲ್ ಆಗಿದ್ದು, ಇದನ್ನು ಪೊಲೀಸರು ಗಮನಿಸಿದ್ದು ಆ ಯುವತಿಗೆ ನೋಟಿಸ್ ಜಾರಿ ಮಾಡಿದ್ದಾರೆ. ಸಂಚಾರಿ ನಿಯಮಗಳನ್ನು ಉಲ್ಲಂಘನೆ ಮಾಡಿದ ಆರೋಪದಡಿಯಲ್ಲಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.
ನೃತ್ಯ ಮಾಡಿದ ಯುವತಿಯನ್ನು ಶ್ರೇಯಾ ಕಲ್ರಾ ಎಂದು ಗುರುತಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.