ADVERTISEMENT

ವೈರಲ್ ವಿಡಿಯೊ: ಕುಂದಾಪುರದಲ್ಲೂ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ

​ಪ್ರಜಾವಾಣಿ ವಾರ್ತೆ
Published 2 ಮಾರ್ಚ್ 2020, 6:24 IST
Last Updated 2 ಮಾರ್ಚ್ 2020, 6:24 IST
   

ಉಡುಪಿ: ಕುಂದಾಪುರದ ತಹಶೀಲ್ದಾರ್ ಕಚೇರಿಯಲ್ಲಿ ಸೋಮವಾರ ವ್ಯಕ್ತಿಯೊಬ್ಬ ಪಾಕಿಸ್ತಾನ ಜಿಂದಾಬಾಂದ್ ಘೋಷಣೆ ಕೂಗಿದ್ದಾನೆ.

ಸ್ಥಳೀಯನಾದ ರಾಘವೇಂದ್ರ ಘೋಷಣೆ ಕೂಗಿದವ. ಆತನನ್ನು ಕುಂದಾಪುರ ಪೊಲೀಸರು ಬಂಧಿಸಿದ್ದು ವಿಚಾರಣೆಗೊಳಪಡಿಸಿದ್ದಾರೆ‌. ಮೇಲ್ನೋಟಕ್ಕೆ ಅಸ್ವಸ್ಥನಂತೆ ಕಾಣುತ್ತಿದ್ದು ವಿಚಾರಣೆ ನಡೆಯುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಆರೋಪಿ ರಾಘವೇಂದ್ರ ಪಾಕಿಸ್ತಾನ ಪರ‌ ಜಿಂದಾಬಾದ್ ಕೂಗಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಶೇರ್ ಆಗಿದೆ.

ADVERTISEMENT

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.