ADVERTISEMENT

ರಷ್ಯಾದ ಆಗ್ನೇಯ ಸೈಬೀರಿಯಾ ಕಾಡಿನಲ್ಲಿ ವಿಮಾನ ತುರ್ತು ಭೂಸ್ಪರ್ಶ: ನಾಲ್ವರು ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 14 ಸೆಪ್ಟೆಂಬರ್ 2021, 6:33 IST
Last Updated 14 ಸೆಪ್ಟೆಂಬರ್ 2021, 6:33 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮಾಸ್ಕೋ (ರಷ್ಯಾ): ರಷ್ಯಾದ ಆಗ್ನೇಯ ಸೈಬೀರಿಯಾದ ಕಾಡಿನಲ್ಲಿ ಲಘು ವಿಮಾನವೊಂದು ತುರ್ತು ಭೂಸ್ಪರ್ಶ ಮಾಡಿದ್ದು, ನಾಲ್ಕು ಮಂದಿ ಮೃತಪಟ್ಟಿದ್ದಾರೆ.

ವಿಮಾನದಲ್ಲಿ ಇಬ್ಬರು ಪೈಲಟ್‌ಗಳು ಸೇರಿದಂತೆ ಒಟ್ಟು 16 ಮಂದಿ ಪ್ರಯಾಣಿಕರಿದ್ದರು ಎಂದು ತಿಳಿದು ಬಂದಿದೆ.

ಇರ್ಕುಟ್ಸ್ಕ್ ನಗರದಿಂದ ಹಾರಾಟ ನಡೆಸಿದ್ದ ಎಲ್ -410 ಸಂಖ್ಯೆಯ ವಿಮಾನವು ಕಜಚಿಂಕೋಯ್ ಗ್ರಾಮದ ಬಳಿ ಅಪಘಾತಕ್ಕೀಡಾಗಿದೆ ಎಂದು ಸ್ಥಳೀಯ ತನಿಖಾ ಸಂಸ್ಥೆಯೊಂದು ಹೇಳಿದೆ.

ADVERTISEMENT

ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ ಎಂದು ವಿಮಾನದೊಳಗಿದ್ದ ಸಿಬ್ಬಂದಿಯೊಬ್ಬರು ಮಾಹಿತಿ ರವಾನಿಸಿದ್ದರು ಎಂದು ಸ್ಥಳೀಯ ತುರ್ತು ಸೇವೆಗಳ ಪ್ರಾಥಮಿಕ ವರದಿ ತಿಳಿಸಿರುವುದಾಗಿ ಇಂಟರ್‌ಫ್ಯಾಕ್ಸ್ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಸದ್ಯ ಘಟನಾ ಸ್ಥಳದಲ್ಲಿ 11 ಮಂದಿಯನ್ನು ರಕ್ಷಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.