ADVERTISEMENT

ಚೀನಾದಲ್ಲಿ ದೋಣಿ ಮುಳುಗಿ 8 ಸಾವು

​ಪ್ರಜಾವಾಣಿ ವಾರ್ತೆ
Published 19 ಸೆಪ್ಟೆಂಬರ್ 2021, 17:20 IST
Last Updated 19 ಸೆಪ್ಟೆಂಬರ್ 2021, 17:20 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಬೀಜಿಂಗ್‌: ವಾಯವ್ಯ ಚೀನಾದ ಗಿಜ್ಹೋವ್‌ ಪ್ರಾಂತ್ಯದಲ್ಲಿ ಪ್ರಯಾಣಿಕರ ದೋಣಿಯೊಂದು ಮುಳುಗಿ ಕನಿಷ್ಠ 9 ಮಂದಿ ಸಾವಿಗೀಡಾಗಿದ್ದಾರೆ ಮತ್ತು 6 ಮಂದಿ ನಾಪತ್ತೆಯಾಗಿದ್ದಾರೆ.

ಜಾಂಗ್ಕೆ ನದಿಯಲ್ಲಿ ಈ ದುರ್ಘಟನೆ ನಡೆದಿದೆ. 40 ಜನರು ಪ್ರಯಾಣಿಸಬಹುದಾದ ಸಾಮರ್ಥ್ಯವನ್ನು ದೋಣಿ ಹೊಂದಿತ್ತು. ದೋಣಿ ಮುಳುಗಿದ ಸಂದರ್ಭದಲ್ಲಿದ್ದ ಪ್ರಯಾಣಿಕರ ನಿಖರ ಸಂಖ್ಯೆಯ ಬಗ್ಗೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

9 ಮೃತದೇಹಗಳನ್ನು ಪತ್ತೆ ಮಾಡಲಾಗಿದೆ. 39 ಜನರನ್ನು ರಕ್ಷಿಸಿದ್ದು ತನಿಖೆ ಕೈಗೊಳ್ಳಲಾಗಿದೆ ಎಂದು ವರದಿಯಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.