ADVERTISEMENT

ಆಸ್ಟ್ರೇಲಿಯಾದಲ್ಲಿ ಕೋವಿಡ್‌ ಹೊಸ ಪ್ರಕರಣಗಳ ಸಂಖ್ಯೆ ಹೆಚ್ಚಳ

​ಪ್ರಜಾವಾಣಿ ವಾರ್ತೆ
Published 23 ಸೆಪ್ಟೆಂಬರ್ 2021, 7:47 IST
Last Updated 23 ಸೆಪ್ಟೆಂಬರ್ 2021, 7:47 IST
ಆಸ್ಟ್ರೇಲಿಯಾದ ಮೆಲ್ಬರ್ನ್‌ ನಗರದಲ್ಲಿ ಬುಧವಾರ ಕೋವಿಡ್‌–19 ನಿರ್ಬಂಧಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಉದ್ಯಮಿಗಳು
ಆಸ್ಟ್ರೇಲಿಯಾದ ಮೆಲ್ಬರ್ನ್‌ ನಗರದಲ್ಲಿ ಬುಧವಾರ ಕೋವಿಡ್‌–19 ನಿರ್ಬಂಧಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಉದ್ಯಮಿಗಳು   

ಸಿಡ್ನಿ(ಎಪಿ): ಆಸ್ಟ್ರೇಲಿಯಾದ ಮೆಲ್ಬರ್ನ್ ನಗರದಲ್ಲಿ ಕೋವಿಡ್‌ ಸಾಂಕ್ರಾಮಿಕರೋಗ ದಿಢೀರನೆ ಉಲ್ಬಣಗೊಂಡಿದ್ದು, ವಿಕ್ಟೋರಿಯಾ ರಾಜ್ಯದಲ್ಲಿ ಕೊರೊನಾ ಸೋಂಕಿನ ಹೊಸ ಪ್ರಕರಣಗಳು ಅಧಿಕ ಪ್ರಮಾಣದಲ್ಲಿ ನಿತ್ಯ ದಾಖಲಾಗುತ್ತಿವೆ.

ಕೋವಿಡ್‌ ಸೋಂಕು ನಿಯಂತ್ರಣದ ಹಿನ್ನೆಲೆಯಲ್ಲಿ ಸರ್ಕಾರ ವಿಧಿಸಿರುವ ಲಾಕ್‌ಡೌನ್‌ ವಿರೋಧಿಸಿ, ಸಾರ್ವಜನಿಕರು ಮೆಲ್ಬರ್ನ್ ನಗರದ ವಿವಿಧೆಡೆ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಪ್ರತಿಭಟನೆಗಳನ್ನು ನಿಯಂತ್ರಿಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ. ಸದ್ಯಕ್ಕೆ ಗುರುವಾರ ನಗರದಲ್ಲಿ ಪರಿಸ್ಥಿತಿ ಶಾಂತವಾಗಿದೆ.

ವಿಕ್ಟೋರಿಯಾದಲ್ಲಿ ಇಲ್ಲಿವರೆಗೆ 766 ಕೋವಿಡ್‌ ಪ್ರಕರಣಗಳು ವರದಿಯಾಗಿದ್ದು, ಸೋಂಕಿನಿಂದ ನಾಲ್ವರು ಮೃತಪಟ್ಟಿದ್ದಾರೆ. ನ್ಯೂ ಸೌತ್‌ ವೇಲ್ಸ್‌ ರಾಜ್ಯದಲ್ಲಿರುವ ಸಿಡ್ನಿ ನಗರದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ದಿಢೀರನೆ ಏರಿಕೆಯಾಗಿವೆ. ಸರ್ಕಾರದ ಮಾಹಿತಿ ಪ್ರಕಾರ, ನಿತ್ಯ ಒಂದು ಸಾವಿರ ಹೊಸ ಪ್ರಕರಣಗಳು ದಾಖಲಾಗುತ್ತಿವೆ. ಸೋಂಕಿನಿಂದ ನಿತ್ಯ ಆರು ಮಂದಿ ಮೃತಪಡುತ್ತಿದ್ದಾರೆ ಎಂದು ವರದಿಯಾಗುತ್ತಿದೆ.

ADVERTISEMENT

‘ವಿಕ್ಟೋರಿಯಾ ರಾಜ್ಯದಲ್ಲಿ ತಿಂಗಳ ಅಂತ್ಯದ ವೇಳೆಗೆ ಲಾಕ್‌ಡೌನ್ ನಿಯಮಗಳನ್ನು ಸಡಿಲಗೊಳಿಸುವ ಸಾಧ್ಯತೆ ಇದೆ‘ ಎಂದು ಹೇಳಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.