ADVERTISEMENT

ಅಫ್ಗಾನಿಸ್ತಾನದ ನಂಗರ್‌ಹಾರ್ ಪ್ರಾಂತ್ಯದಲ್ಲಿ ಸರಣಿ ಸ್ಫೋಟ, 3 ಸಾವು

ಏಜೆನ್ಸೀಸ್
Published 18 ಸೆಪ್ಟೆಂಬರ್ 2021, 9:22 IST
Last Updated 18 ಸೆಪ್ಟೆಂಬರ್ 2021, 9:22 IST
ಐಸ್ಟಾಕ್: ಪ್ರಾತಿನಿಧಿಕ ಚಿತ್ರ
ಐಸ್ಟಾಕ್: ಪ್ರಾತಿನಿಧಿಕ ಚಿತ್ರ   

ಕಾಬೂಲ್: ಅಫ್ಗಾನಿಸ್ತಾನದ ನಂಗರ್‌ಹಾರ್ ಪ್ರಾಂತ್ಯದಲ್ಲಿ ತಾಲಿಬಾನ್ ವಾಹನಗಳನ್ನು ಗುರಿಯಾಗಿಸಿಕೊಂಡು ಮೂರು ಸ್ಫೋಟಗಳನ್ನು ನಡೆಸಲಾಗಿದೆ. ಘಟನೆಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದು, 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ಜಲಾಲಬಾದ್‌ನಲ್ಲಿ ನಡೆದ ಸ್ಫೋಟದ ಹೊಣೆಯನ್ನು ಯಾವುದೇ ಸಂಘಟನೆ ಹೊತ್ತುಕೊಂಡಿಲ್ಲ, ಆದರೆ, ಇಸ್ಲಾಮಿಕ್ ಸ್ಟೇಟ್ ಗ್ರೂಪ್‌ನ ಅಂಗಸಂಸ್ಥೆಯು ಪೂರ್ವ ಅಫ್ಗಾನಿಸ್ತಾನದಲ್ಲಿ ಪ್ರಧಾನ ಕಚೇರಿಯನ್ನು ಹೊಂದಿದ್ದು, ಹೊಸ ತಾಲಿಬಾನ್ ಆಡಳಿತದ ವಿರೋಧಿಯಾಗಿದೆ.

ಮೃತರು ಮತ್ತು ಗಾಯಗೊಂಡವರಲ್ಲಿ ತಾಲಿಬಾನ್ ಅಧಿಕಾರಿಗಳು ಇದ್ದಾರೆಯೇ ಎಂಬುದು ತಕ್ಷಣಕ್ಕೆ ಸ್ಪಷ್ಟವಾಗಿಲ್ಲ. ಆದರೆ, ಸ್ಫೋಟದ ಗುರಿ ತಾಲಿಬಾನ್ ಆಡಳಿತವೇ ಆಗಿತ್ತು ಎನ್ನಲಾಗಿದೆ.

ADVERTISEMENT

ಕಾಬೂಲ್‌ನಲ್ಲಿಯೂ ಶನಿವಾರ ಬಾಂಬ್ ಸ್ಫೋಟಗೊಂಡು ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಕಾಬೂಲ್ ಬಾಂಬ್‌ನ ಗುರಿ ಯಾರೆಂದು ತಕ್ಷಣಕ್ಕೆ ಸ್ಪಷ್ಟವಾಗಿಲ್ಲ.

ಆಗಸ್ಟ್ 26ರಂದು ಕಾಬೂಲ್ ವಿಮಾನ ನಿಲ್ದಾಣದಲ್ಲಿ ಸಂಭವಿಸಿದ್ದ ಬಾಂಬ್ ಸ್ಫೋಟದಲ್ಲಿ ಅಫ್ಗಾನಿಸ್ತಾನದ ಪ್ರಜೆಗಳು, ಅಮೆರಿಕದ ಮಿಲಿಟರಿ ಸಿಬ್ಬಂದಿ ಸೇರಿ ನೂರಕ್ಕೂ ಹೆಚ್ಚು ಮಂದಿ ಸಾವಿಗೀಡಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.