ADVERTISEMENT

ಅನೇಕರಿಗೆ ಕಮಲಾ ಹ್ಯಾರಿಸ್‌ ಸ್ಫೂರ್ತಿದಾಯಕ: ನರೇಂದ್ರ ಮೋದಿ ಶ್ಲಾಘನೆ

ಪಿಟಿಐ
Published 24 ಸೆಪ್ಟೆಂಬರ್ 2021, 8:04 IST
Last Updated 24 ಸೆಪ್ಟೆಂಬರ್ 2021, 8:04 IST
ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್‌ ಅವರು ಶ್ವೇತಭವನದಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದರು –ಪಿಟಿಐ ಚಿತ್ರ
ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್‌ ಅವರು ಶ್ವೇತಭವನದಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದರು –ಪಿಟಿಐ ಚಿತ್ರ   

ವಾಷಿಂಗ್ಟನ್‌: ‘ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್‌ ಅವರು ವಿಶ್ವದ ನೂರಾರು ಜನರಿಗೆ ಸ್ಫೂರ್ತಿಯ ಸೆಲೆಯಾಗಿದ್ದಾರೆ. ಅಧ್ಯಕ್ಷ ಜೋ ಬೈಡನ್‌ ಹಾಗೂ ಕಮಲಾ ಹ್ಯಾರಿಸ್‌ ಅವರ ನಾಯಕತ್ವದಲ್ಲಿ ಭಾರತ ಮತ್ತು ಅಮೆರಿಕ ನಡುವಿನ ದ್ವಿಪಕ್ಷೀಯ ಸಂಬಂಧ ಹೊಸ ಎತ್ತರ ತಲುಪಲಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ವಿಶ್ವಾಸ ವ್ಯಕ್ತಪಡಿಸಿದರು.

ದ್ವಿಪಕ್ಷೀಯ ಮಾತುಕತೆಗೂ ಮುನ್ನ ಶ್ವೇತಭವನದಲ್ಲಿ ಉಭಯ ನಾಯಕರು ನಡೆಸಿದ ಜಂಟಿ ಸುದ್ದಿಗೋಷ್ಠಿಯಲ್ಲಿ ಮೋದಿ ಅವರು ಈ ಮೆಚ್ಚುಗೆಯ ಮಾತುಗಳನ್ನಾಡಿದರು.

‘ನೀವು ಅಮೆರಿಕದ ಉಪಾಧ್ಯಕ್ಷೆಯಾಗಿ ಆಯ್ಕೆಯಾಗಿದ್ದು ಐತಿಹಾಸಿಕ ಹಾಗೂ ಮಹತ್ವದ ಕ್ಷಣ. ವಿಶ್ವದ ಅನೇಕರಿಗೆ ನೀವು ಪ್ರೇರಣೆಯಾಗಿದ್ದೀರಿ’ ಎಂದು ಕಮಲಾ ಹ್ಯಾರಿಸ್ ಅವರನ್ನು ಉದ್ದೇಶಿಸಿ ಮೋದಿ ಹೇಳಿದರು.

ADVERTISEMENT

ಭಾರತಕ್ಕೆ ಭೇಟಿ ನೀಡುವಂತೆ ಕಮಲಾ ಹ್ಯಾರಿಸ್‌ ಹಾಗೂ ಪತಿ ಡಗ್ಲಾಸ್‌ ಎಮ್‌ಹಾಫ್‌ ಅವರಿಗೆ ಇದೇ ಸಂದರ್ಭದಲ್ಲಿ ಮೋದಿ ಅವರು ಆಹ್ವಾನ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.