150 ಮನೆ ನಿರ್ಮಾಣಕ್ಕೆ ಶಂಕು ಸ್ಥಾಪನೆ

ಕಲಬುರ್ಗಿ: ವಸತಿ ಇಲಾಖೆ, ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿಯಲ್ಲಿ ಕಪನೂರ ಕೊಳೆಗೇರಿ ಪ್ರದೇಶದಲ್ಲಿ 150 ಮನೆಗಳ ನಿರ್ಮಾಣ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಶಂಕು ಸ್ಥಾಪನೆ ನೆರವೇರಿಸಿದರು.

ಸಂಸದ ಮಲ್ಲಿಕಾರ್ಜುನ ಖರ್ಗೆ, ಶಾಸಕಿ ಕನ್ನೀಜ್ ಫಾತಿಮಾ, ಮೇಯರ್ ಶರಣಕುಮಾರ ಮೋದಿ, ಕಾಂಗ್ರೆಸ್ ಜಿಲ್ಲಾ ಸಮಿತಿ ಅಧ್ಯಕ್ಷ ಜಗದೇವ ಗುತ್ತೇದಾರ, ಸಂಘಾನಂದ ಭಂತೇಜಿ, ಅಲ್ಲಮಪ್ರಭು ಪಾಟೀಲ, ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ ಇದ್ದರು.

ಪ್ರಮುಖ ಸುದ್ದಿಗಳು