ಕುಂದಾಪುರ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಮೀಸಲು: ರಿಟ್ ಅರ್ಜಿ ವಿಚಾರಣೆ ಮುಂದಕ್ಕೆ

ಬೆಂಗಳೂರು: ಕುಂದಾಪುರ ನಗರಸಭೆ ಅಧ್ಯಕ್ಷ ಉಪಾಧ್ಯಕ್ಷ ಮೀಸಲು ನಿಗದಿ ಪ್ರಶ್ನಿಸಿದ ರಿಟ್ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಇದೇ 14ಕ್ಕೆ ಮುಂದೂಡಿದೆ. 

ಈ ಕುರಿತ ಅರ್ಜಿಯನ್ನು ನ್ಯಾಯಮೂರ್ತಿ ಜಿ.ನರೇಂದರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

"ಸ್ಥಳೀಯ ಸಂಸ್ಥೆಗಳ ಮೀಸಲು ನಿಗದಿ ಪ್ರಶ್ನಿಸಿದ ಅರ್ಜಿಗಳನ್ನು ಧಾರವಾಡ ಹೈಕೋರ್ಟ್ ಪೀಠ ನಿನ್ನೆಯಷ್ಟೇ ಮಾನ್ಯ ಮಾಡಿ ತಡೆ ‌ನೀಡಿದೆ. ಆದ್ದರಿಂದ ನಮ್ಮ ಅರ್ಜಿಯನ್ನೂ ಮಾನ್ಯ ಮಾಡಬೇಕು" ಎಂದು ಅರ್ಜಿದಾರರ ಪರ ವಕೀಲರು ನ್ಯಾಯಪೀಠಕ್ಕೆ ಮನವಿ ಮಾಡಿದರು.

ಅಂತೆಯೇ ಧಾರವಾಡ ಹೈಕೋರ್ಟ್ ಆದೇಶ ಹಾಜರುಪಡಿಸಲು ಸಮಯಾವಕಾಶ ಕೋರಿದರು. 

ಇದನ್ನು ಮಾನ್ಯ ಮಾಡಿದ ನ್ಯಾಯಪೀಠ ವಿಚಾರಣೆಯನ್ನು ಇದೇ14ಕ್ಕೆ  ಮುಂದೂಡಿದೆ.

"ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದಂತೆ ಅಧ್ಯಕ್ಷ ಉಪಾಧ್ಯಕ್ಷರ ಮೀಸಲಾತಿಯಲ್ಲಿ ನಮ್ಮನ್ನು ಅಧಿಕಾರದಿಂದ ದೂರ ಇಡುವ ದುರುದ್ದೇಶದಿಂದ ಮೀಸಲಾತಿಯನ್ನು ಬದಲಿಸಿ ಆದೇಶ ಹೊರಡಿಸಲಾಗಿದೆ" ಎಂಬುದು ಅರ್ಜಿದಾರರ ಆಕ್ಷೇಪ.

ಸೋಮವಾರವಷ್ಟೇ (ಸೆ.10) ಧಾರವಾಡ ಹೈಕೋರ್ಟ್ ನ್ಯಾಯಪೀಠವು ಬೀಳಗಿ, ರಾಮದುರ್ಗ ಮತ್ತು ಬಾಗಲಕೋಟೆಯಲ್ಲಿ ನಿಗದಿಯಾಗಿದ್ದ ಮೀಸಲಾತಿಗೆ  ತಡೆಯಾಜ್ಞೆ ನೀಡಿದೆ.

ಪ್ರಮುಖ ಸುದ್ದಿಗಳು