ರಫೇಲ್ ಖರೀದಿ ತನಿಖೆಗೆ ಆಗ್ರಹ: ಕಾಂಗ್ರೆಸ್ ಜಾಥಾ, ಪ್ರತಿಭಟನೆ

ಮಂಗಳೂರು: ರಫೇಲ್‌ ಯುದ್ಧ ವಿಮಾನ ಖರೀದಿ ಒಪ್ಪಂದ ಬದಲಾವಣೆಯಲ್ಲಿ ಸಾವಿರಾರು ಕೋಟಿ‌ ರೂಪಾಯಿ ಹಗರಣ ನಡೆದಿದೆ ಎಂದು ಆರೋಪಿಸಿರುವ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ, ಈ ಕುರಿತು ತನಿಖೆಗೆ ಆಗ್ರಹಿಸಿ ನಗರದಲ್ಲಿ ಮಂಗಳವಾರ ಜಾಥಾ ಮತ್ತು ಪ್ರತಿಭಟನೆ ನಡೆಸಿತು.

ಡಾ.ಬಿ.ಆರ್.ಅಂಬೇಡ್ಕರ್ ‌ವೃತ್ತದಿಂದ ಆರಂಭವಾದ ಜಾಥಾ ಜಿಲ್ಲಾಧಿಕಾರಿ ಕಚೇರಿ‌ ಎದುರು ತಲುಪಿದೆ. ಪ್ರತಿಭಟನಾ ಸಭೆ ಆರಂಭವಾಗಿದ್ದು, ಕೇಂದ್ರದ ಎನ್ ಡಿಎ ಸರ್ಕಾರ, ಪ್ರಧಾನಿ ನರೇಂದ್ರ ಮೋದಿ ಹಾಗೂ‌ ಬಿಜೆಪಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಘೋಷಣೆ ಕೂಗಿದರು.

ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರೂ ಆಗಿರುವ ವಿಧಾನ ಪರಿಷತ್ ಸದಸ್ಯ ಕೆ.ಹರೀಶ್ ಕುಮಾರ್, ಮಾಜಿ ಶಾಸಕರಾದ ಜೆ.ಆರ್.ಲೋಬೊ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪಿ.ವಿ.ಮೋಹನ್, ಮೇಯರ್ ಭಾಸ್ಕರ್, ಮಾಜಿ ಮೇಯರ್ ಕವಿತಾ ಸನಿಲ್ ಸೇರಿದಂತೆ ಹಲವು ಮುಖಂಡರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.

ಪ್ರಮುಖ ಸುದ್ದಿಗಳು