ಅಪರಾಧಿಗಳಿಗೆ ಶಿಕ್ಷೆ ಜಾರಿ ವಿಳಂಬ: ಆಯೋಗಕ್ಕೆ ಮನವಿ

ನವದೆಹಲಿ (ಪಿಟಿಐ): ನಿರ್ಭಯಾ ಅತ್ಯಾಚಾರ ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಘೋಷಿಸಲಾಗಿರುವ ಶಿಕ್ಷೆಯನ್ನು ಜಾರಿ ಮಾಡುವುದರಲ್ಲಿ ವಿಳಂಬವಾಗುತ್ತಿದ್ದು, ಈ ನಿಟ್ಟಿನಲ್ಲಿ ಜೈಲು ಅಧಿಕಾರಿಗಳ ಮೇಲೆ ಒತ್ತಡ ಹೇರಬೇಕು ಎಂದು ನಿರ್ಭಯಾ ತಾಯಿ ದೆಹಲಿ ಮಹಿಳಾ ಆಯೋಗಕ್ಕೆ ಮಂಗಳವಾರ ಮನವಿ ಮಾಡಿದ್ದಾರೆ. 

ಶಿಕ್ಷೆ ಜಾರಿ ವಿಷಯದಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿರುವ ಕುರಿತು ವಿವರಣೆ ನೀಡುವಂತೆ ತಿಹಾರ್‌ ಜೈಲು ಅಧಿಕಾರಿಗಳಿಗೆ ಆಯೋಗವು ಸೋಮವಾರ ನೋಟಿಸ್‌ ನೀಡಿತ್ತು.

ಸುಪ್ರೀಂಕೋರ್ಟ್‌ ಆದೇಶ ನೀಡಿದ್ದರೂ, ಅಪರಾಧಿಗಳಿಗೆ ಇನ್ನೂ ಏಕೆ ನೇಣಿಗೇರಿಸಿಲ್ಲ ಎಂಬ ಬಗ್ಗೆ ಪರಿಶೀಲಿಸಬೇಕು ಎಂದು ಕಳೆದ ವರ್ಷವೂ ನಿರ್ಭಯಾ ತಾಯಿ ಆಯೋಗಕ್ಕೆ ಮನವಿ ಮಾಡಿದ್ದರು.

ಪ್ರಮುಖ ಸುದ್ದಿಗಳು