ಕೊಡಗು ಜಿಲ್ಲೆಯ ವಿವಿಧೆಡೆ ಮತ್ತೆ ಗುಡುಗು ಸಹಿತ ಮಳೆ ಆರ್ಭಟ

ಮಡಿಕೇರಿ: ಕೊಡಗು ಜಿಲ್ಲೆಯ ವಿವಿಧೆಡೆ ಮಂಗಳವಾರ ಸಂಜೆ ಧಾರಾಕಾರ ಮಳೆ ಸುರಿಯಿತು. ಗುಡುಗು, ಮಿಂಚು ಸಹಿತ ಅರ್ಧ ಗಂಟೆ ಮಳೆ ಆರ್ಭಟಿಸಿತು.

ಆಗಸ್ಟ್‌ನಲ್ಲಿ ಸುರಿದಿದ್ದ ಮಹಾಮಳೆಯಿಂದ ಜಿಲ್ಲೆಯ ಜನರು ಕಂಗಾಲಾಗಿದ್ದರು. ಒಂದು ವಾರ ಬಿಸಿಲು ಕಾಣಿಸಿಕೊಂಡ ಪರಿಣಾಮ ಜನರು ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದರು. ಈಗ ಮತ್ತೆ ಮಳೆ ಸುರಿಯುತ್ತಿರುವುದು ಆತಂಕ ಮೂಡಿಸಿದೆ.

ಮಡಿಕೇರಿ, ನಾಪೋಕ್ಲು, ಭಾಗಮಂಡಲ, ಮಕ್ಕಂದೂರು, ಕಾಲೂರು, ಗಾಳಿಬೀಡು, ಸುಂಟಿಕೊಪ್ಪದಲ್ಲೂ ಧಾರಾಕಾರ ಮಳೆ ಸುರಿಯಿತು. 

ಪ್ರಮುಖ ಸುದ್ದಿಗಳು