ಎನ್‌ಕೌಂಟರ್‌ ಸಮರ್ಥಿಸಿಕೊಂಡ ಡಿಜಿಪಿ

ನವದೆಹಲಿ: ಕ್ರಿಮಿನಲ್‌ಗಳನ್ನು ಬಂಧಿಸುವ ಮತ್ತು ನಿಯಂತ್ರಿಸುವ ನಿಟ್ಟಿನಲ್ಲಿ ಎನ್‌ಕೌಂಟರ್‌ನಂತಹ ಕ್ರಮಗಳನ್ನು ತೆಗೆದುಕೊಳ್ಳುವುದು ಅನಿವಾರ್ಯ ಎಂದು ಉತ್ತರ ಪ್ರದೇಶ ಡಿಜಿಪಿ ಓ.ಪಿ.ಸಿಂಗ್‌ ಹೇಳಿದ್ದಾರೆ. 

‘ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ 63 ಕ್ರಿಮಿನಲ್‌ಗಳನ್ನು ಎನ್‌ಕೌಂಟರ್‌ ಮಾಡಲಾಗಿದೆ. ಈ ಕಾರ್ಯಾಚರಣೆಯಲ್ಲಿ ನಾಲ್ವರು ಪೊಲೀಸರೂ ಸಾವನ್ನಪ್ಪಿದ್ದು, 500ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ’ ಎಂದು ಅವರು ತಿಳಿಸಿದ್ದಾರೆ.

ಪ್ರಮುಖ ಸುದ್ದಿಗಳು