ಪತ್ನಿ ಶೀಲ ಶಂಕಿಸಿ ಕೊಲೆಗೆ ಯತ್ನ; ಆರೋಪಿ ಬಂಧನ

ಜಗಳೂರು: ಪತ್ನಿಯ ಶೀಲ ಶಂಕಿಸಿದ ಪತಿ ಸೋಮವಾರ ಚಾಕುವಿನಿಂದ ಇರಿದು ಪರಾರಿಯಾಗಿದ್ದು, ಮಂಗಳವಾರ ಜಗಳೂರು ಪೊಲೀಸರು ಬಂಧಿಸಿದ್ದಾರೆ.

ಪಟ್ಟಣದ ಬಸವರಾಜು (25) ಬಂಧಿತ ಆರೋಪಿ. ಅವನ ಪತ್ನಿ ದೇವಮ್ಮ ತನ್ನ ಚಿಕ್ಕಪ್ಪನ ಮನೆಗೆ ಹೋಗಿದ್ದರಿಂದ ಕೆರಳಿ ಕುತ್ತಿಗೆ ಹಾಗೂ ತಲೆಗೆ ಇರಿದಿದ್ದ. ಇರಿಯುವಾಗ ಚಾಕು ಮುರಿದಿದ್ದರಿಮದ ದೇವಮ್ಮ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಲಾಟೆ ಕೇಳಿ ಪಕ್ಕದ ಮನೆಯವರು ಕಿಟಕಿಯಲ್ಲಿ ನೋಡುತ್ತಿದ್ದಂತೆ ಬಸವರಾಜ ಪರಾರಿಯಾಗಿದ್ದ.

ಪೊಲೀಸರು ಮಂಗಳವಾರ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆಟೊ ಚಾಲಕ ಆತ್ಮಹತ್ಯೆ

ಜಗಳೂರು: ಆಟೊರಿಕ್ಷಾ ಚಾಲಕ ಮಂಜುನಾಥ್‌ ಬಡಾವಣೆಯ ಬಸವರಾಜ್‌ (23) ಸೋಮವಾರ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ತಾಯಿ ಹಾಗೂ ಸಹೋದರಿಯೊಂದಿಗೆ ವಾಸವಾಗಿದ್ದ ಬಸವರಾಜ್‌ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ನೇಣು ಹಾಕಿಕೊಂಡಿದ್ದಾನೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ ಎಂದು ಇಲ್ಲಿನ ಪೊಲೀಸರು ತಿಳಿಸಿದ್ದಾರೆ.

ಪ್ರಮುಖ ಸುದ್ದಿಗಳು