ರೋಡ್‌ ರೋಲರ್‌ಗೆ ಸಿಲುಕಿ ವಿದ್ಯಾರ್ಥಿನಿ ಸಾವು

ಆನೇಕಲ್: ವಾಹನ ಮತ್ತು ರೋಡ್‌ ರೋಲರ್‌ ನಡುವೆ ಸಂಭವಿಸಿದ ಅಪಘಾತದಲ್ಲಿ ವಿದ್ಯಾರ್ಥಿನಿಯೊಬ್ಬರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಬೆಂಗಳೂರು–ಹೊಸೂರು ಮುಖ್ಯ ರಸ್ತೆಯ ಬೊಮ್ಮಸಂದ್ರ ಸರ್ವಿಸ್ ರಸ್ತೆಯಲ್ಲಿ ಬುಧವಾರ ನಡೆದಿದೆ.

ಯುವತಿಯನ್ನು ಬೊಮ್ಮಸಂದ್ರ ಮೂಲದ ಲಯ (19) ಎಂದು ಗುರುತಿಸಲಾಗಿದೆ. ಇವರು ಎಸ್‌ಎಫ್‌ಎಸ್‌ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು. ಕಾಲೇಜಿಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ರೋಡ್‌ ರೋಲರ್‌ಗೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಹೆಬ್ಬಗೋಡಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಪ್ರಮುಖ ಸುದ್ದಿಗಳು