ಕಮಲಾಕ್ಷಿ, ಪಾಟೀಲರಿಗೆ ಹಾಲಭಾವಿ ಪ್ರಶಸ್ತಿ

ಮೈಸೂರು: ಕಲಾಗುರು ಡಿ.ವಿ.ಹಾಲಭಾವಿ ಪ್ರಶಸ್ತಿಗೆ 2017ನೇ ಸಾಲಿಗೆ ಲಲಿತಕಲಾ ಅಕಾಡೆಮಿ ಅಧ್ಯಕ್ಷೆ ಪ್ರೊ.ಎಂ.ಜೆ.ಕಮಲಾಕ್ಷಿ ಹಾಗೂ 2018ನೇ ಸಾಲಿಗೆ ಧಾರವಾಡದ ಡಾ.ಎಸ್‌.ಸಿ.ಪಾಟೀಲ ಆಯ್ಕೆಯಾಗಿದ್ದಾರೆ.

ಪ್ರಶಸ್ತಿಯು ತಲಾ ₹ 10 ಸಾವಿರ ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ. ಹಾಲಭಾವಿಯವರ ಹೆಸರಿನಲ್ಲಿ ನಗರದ ಜೆಎಸ್‌ಎಸ್ ಮಹಾವಿದ್ಯಾಪೀಠದಿಂದ ಧಾರವಾಡದ ಬೆಲ್ಲದ ಶಿಕ್ಷಣ ಮತ್ತು ಕೃಷಿ ಪ್ರತಿಷ್ಠಾನದ ಸಹಯೋಗದೊಂದಿಗೆ ಈ ಪ್ರಶಸ್ತಿ ನೀಡಲಾಗುತ್ತದೆ.

ಡಾ.ಎಸ್‌.ಸಿ.ಪಾಟೀಲರು ಹಂಪಿ ಕನ್ನಡ ವಿಶ್ವವಿದ್ಯಾಲಯದ ಲಲಿತಕಲಾ ವಿಭಾಗದಲ್ಲಿ ಪ್ರಾಧ್ಯಾಪಕರಾಗಿ, ಮುಖ್ಯಸ್ಥರಾಗಿದ್ದರು. ಜತೆಗೆ, ಲಲಿತಕಲಾ ವಿಶ್ವವಿದ್ಯಾಲಯದ ವಿಶೇಷಾಧಿಕಾರಿಯಾಗಿ ನಿವೃತ್ತರಾಗಿದ್ದಾರೆ.

ಪ್ರಮುಖ ಸುದ್ದಿಗಳು