ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ

ಮಂಗಳೂರು: ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ಪಿಯುಸಿ ವಿದ್ಯಾರ್ಥಿನಿಯೊಬ್ಬರು ಬುಧವಾರ ಬೆಳಿಗ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬೆಂಗಳೂರಿನ ವಿನುತಾ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಆತ್ಮಹತ್ಯೆಗೆ ಖಚಿತವಾದ ಕಾರಣ ಇನ್ನೂ ಗೊತ್ತಾಗಿಲ್ಲ. ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಮುಖ ಸುದ್ದಿಗಳು