ಫುಟ್‌ಬಾಲ್‌: ರಾಜ್ಯಮಟ್ಟಕ್ಕೆ ಶಾಹೀನ್ ಕಾಲೇಜು ತಂಡ

ಬೀದರ್‌: ನಗರದ ಶಾಹೀನ್ ಪದವಿಪೂರ್ವ ವಿಜ್ಞಾನ ಕಾಲೇಜಿನ ಬಾಲಕರ ಫುಟ್‌ಬಾಲ್‌ ತಂಡವು ರಾಜ್ಯಮಟ್ಟದ ಫುಟ್‌ಬಾಲ್‌ ಸ್ಪರ್ಧೆಗೆ ಆಯ್ಕೆಯಾಗುವ ಮೂಲಕ ಗಮನ ಸೆಳೆದಿದೆ.

ತಾಲ್ಲೂಕಿನ ಕಮಠಾಣ ಸಮೀಪದ ಕರ್ನಾಟಕ ಪಶು ವೈದ್ಯಕೀಯ ವಿಶ್ವವಿದ್ಯಾಲಯದ ಕ್ರೀಡಾಂಗಣದಲ್ಲಿ ನಡೆದ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಜಿಲ್ಲಾಮಟ್ಟದ ಕ್ರೀಡಾಕೂಟದ ಫುಟ್‌ಬಾಲ್‌ ಸ್ಪರ್ಧೆಯಲ್ಲಿ ಭಾಲ್ಕಿಯ ಚನ್ನಬಸವೇಶ್ವರ ಗುರುಕುಲದ ತಂಡವನ್ನು ಸೋಲಿಸಿ ರಾಜ್ಯಮಟ್ಟಕ್ಕೆ ಅರ್ಹತೆ ಪಡೆಯಿತು.

ಶಾಹೀನ್ ಕಾಲೇಜು ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಿಗೂ ಪ್ರಾಮುಖ್ಯ ನೀಡುತ್ತಿದೆ. ಅದರಿಂದಾಗಿಯೇ ಕಾಲೇಜು ವಿದ್ಯಾರ್ಥಿಗಳು ವಿವಿಧ ಕ್ರೀಡೆಗಳಲ್ಲಿ ಉನ್ನತ ಸಾಧನೆ ಮಾಡುತ್ತಿದ್ದಾರೆ ಎಂದು ಶಾಹೀನ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಅಬ್ದುಲ್ ಖದೀರ್ ತಿಳಿಸಿದ್ದಾರೆ.

ಪ್ರಮುಖ ಸುದ್ದಿಗಳು