ಬಟ್ಟೆ ಅಂಗಡಿಗೆ ಬೆಂಕಿ: ₹ 25 ಲಕ್ಷ ಹಾನಿ

ಬೀದರ್: ವಿದ್ಯುತ್ ಶಾರ್ಟ್ ಸರ್ಕಿಟ್‌ನಿಂದಾಗಿ ನಗರದ ಬಟ್ಟೆ ಅಂಗಡಿಯೊಂದರಲ್ಲಿ ಬುಧವಾರ ಬೆಳಗಿನ ಜಾವ ಬೆಂಕಿ ಹೊತ್ತಿಕೊಂಡು ಅಪಾರ ಹಾನಿಯಾಗಿದೆ.

ಬ್ರಿಮ್ಸ್ ಸಮೀಪದ ಶುರಗುಂಟೆ ಕಾಂಪ್ಲೆಕ್ಸ್ನಲ್ಲಿ ಇರುವ ಬಸವರಾಜ ಪಟ್ನೆ ಅವರ ಬಟ್ಟೆ ಅಂಗಡಿಯಲ್ಲಿ ಮಂಗಳವಾರ ತಡರಾತ್ರಿ ಬೆಂಕಿ ಕಾಣಿಸಿಕೊಂಡಿತು. ಕೆಲವೇ ಕ್ಷಣಗಳಲ್ಲಿ ಅಂಗಡಿ ತುಂಬ ಆವರಿಸಿಕೊಂಡು ಸುಮಾರು ₹ 25 ಲಕ್ಷ ಮೌಲ್ಯದ ಬಟ್ಟೆಗಳು ಸುಟ್ಟು ಕರಕಲಾಗಿವೆ. ಅಗ್ನಿ ಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದರು. ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೈಕ್‌ ಕಳ್ಳತನ

ಜನವಾಡ: ಬೀದರ್‌ ತಾಲ್ಲೂಕಿನ ಜನವಾಡದ ಲಾಲಸಾಬ್‌ ಖುರೇಶಿ ತಮ್ಮ ಮನೆಯ ಮುಂದೆ ನಿಲ್ಲಿಸಿದ್ದ ಬೈಕ್‌ನ್ನು ಕಳ್ಳರು ಕದ್ದೊಯ್ದಿದ್ದಾರೆ. ಜನವಾಡ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಮುಖ ಸುದ್ದಿಗಳು