ಡಿಸೆಂಬರ್‌ 2ನೇ ವಾರದೊಳಗೆ ಐದು ರಾಜ್ಯಗಳ ಚುನಾವಣೆ

ನವದೆಹಲಿ: ಐದು ರಾಜ್ಯಗಳ ವಿಧಾನಸಭೆಗೆ ಒಟ್ಟಿಗೆ ಚುನಾವಣೆ ನಡೆಸಲು ಚುನಾವಣಾ ಆಯೋಗ ಪರಿಶೀಲನೆ ನಡೆಸಿದ್ದು ಡಿಸೆಂಬರ್ ಎರಡನೇ ವಾರದಲ್ಲಿ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಆಯೋಗದ ಹಿರಿಯ ಅಧಿಕಾರಿಗಳು ಬುಧವಾರ ಮಾಹಿತಿ ನೀಡಿದ್ದಾರೆ.

ಮಧ್ಯಪ್ರದೇಶ, ಮಿಜೋರಾಂ, ರಾಜಸ್ಥಾನ, ಛತ್ತೀಸಗಡ ಹಾಗೂ ತೆಲಂಗಾಣ ರಾಜ್ಯಗಳಿಗೆ ಚುನಾವಣೆ ನಡೆಯಬೇಕಿದೆ.

ಅವಧಿಗೂ ಮುನ್ನ ವಿಧಾನಸಭೆ ವಿಸರ್ಜನೆಯಾಗಿರುವ ತೆಲಂಗಾಣದಲ್ಲಿ ಮತದಾರರ ಕರಡು ಪಟ್ಟಿ ಶನಿವಾರ ಬಿಡುಗಡೆಯಾಗಲಿದೆ. ಅಕ್ಟೋಬರ್‌ 8ಕ್ಕೆ ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ. ಇದಾದ ನಂತರ ಚುನಾವಣಾ ದಿನಾಂಕ ಘೋಷಣೆಯಾಗಲಿದೆ ಎಂದು ಹೇಳಲಾಗುತ್ತಿದೆ.

 

ಪ್ರಮುಖ ಸುದ್ದಿಗಳು