ಕಲುಷಿತ ಕೆರೆ: ವರದಿಗೆ ಸೂಚನೆ

ನವದೆಹಲಿ: ತುಮಕೂರು ಬಳಿಯ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 4ರಿಂದ ಮಾಗಡಿಗೆ ಸಂಪರ್ಕ ಕಲ್ಪಿಸುವ ರಸ್ತೆ ಹಾಗೂ ನೈಸ್ ಎಕ್ಸ್‌ಪ್ರೆಸ್‌ ರಸ್ತೆಗೆ ಅಂಟಿಕೊಂಡಿರುವ ಕೆರೆಯು ಒಳಚರಂಡಿ ನೀರು ಮತ್ತು ಕೈಗಾರಿಕಾ ತ್ಯಾಜ್ಯದಿಂದ ಕಲುಷಿತಗೊಂಡಿದೆ ಎಂದು ಸಲ್ಲಿಕೆಯಾದ ದೂರಿನ ಬಗ್ಗೆ ಗಮನ ಹರಿಸುವಂತೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ರಾಜ್ಯ ಸರ್ಕಾರ ಹಾಗೂ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ಸೂಚಿಸಿದೆ.

ಕೆರೆಯ ಸ್ಥಿತಿಗತಿ ಕುರಿತು ಸಂಬಂಧಿಸಿದ ಪ್ರಾಧಿಕಾರಗಳೊಂದಿಗೆ ಚರ್ಚಿಸಿ ತಿಂಗಳೊಳಗೆ ವರದಿ ಸಲ್ಲಿಸುವಂತೆ ನ್ಯಾಯಮೂರ್ತಿ ಆದರ್ಶಕುಮಾರ್‌ ಗೋಯೆಲ್‌ ನೇತೃತ್ವದ ಪೀಠ ನಿರ್ದೇಶಿಸಿದೆ.

ಪ್ರಮುಖ ಸುದ್ದಿಗಳು