ಆಳ್ವಾಸ್‌ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ 

ಮೂಡುಬಿದಿರೆ: ಇಲ್ಲಿನ ಆಳ್ವಾಸ್ ಕಾಲೇಜಿನ ಹಾಸ್ಟೆಲ್‍ನಲ್ಲಿ ಬುಧವಾರ ಬೆಳಿಗ್ಗೆ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಬೆಂಗಳೂರು ಆನೆಕಲ್ಲು ನಿವಾಸಿ ರಾಮಚಂದ್ರ ರೆಡ್ಡಿ ಅವರ ಪುತ್ರಿ ವಿನುತಾ (18) ಆತ್ಮಹತ್ಯೆ ಮಾಡಿಕೊಂಡಾಕೆ. ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಈಕೆ, ಬೆಳಿಗ್ಗೆ 6 ಗಂಟೆ ಹೊತ್ತಿಗೆ ಸಹಪಾಠಿ ಸ್ನಾನಕ್ಕೆ ಹೋಗಿದ್ದಾಗ ಫ್ಯಾನಿಗೆ ನೇಣು ಹಾಕಿಕೊಂಡಿದ್ದಾಳೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ವಿನುತಾ ಪ್ರತಿಭಾನ್ವಿತ ವಿದ್ಯಾರ್ಥಿನಿಯಾಗಿದ್ದು, ಪ್ರಥಮ ಪಿಯುಸಿಯಲ್ಲಿ ಶೇ 95ರಷ್ಟು ಅಂಕ ಪಡೆದಿದ್ದಳು. ಈ ಬಾರಿಯ ‘ನೀಟ್‌’ನಲ್ಲಿ ಕಡಿಮೆ ಅಂಕ ಬಂದಿದ್ದರಿಂದ ತನ್ನ ಸಹಪಾಠಿ ಬಳಿ ಬೇಸರ ವ್ಯಕ್ತಪಡಿಸಿದ್ದಳು ಎನ್ನಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಪ್ರಮುಖ ಸುದ್ದಿಗಳು