ಪ್ರಜಾವಾಣಿ ವೆಬ್ ಡೆಸ್ಕ್
ಪ್ರತಿದಿನ 1 ಚಮಚ ಬೆಲ್ಲ ಸೇವಿಸುವುದರಿಂದ ದೇಹಕ್ಕೆ ಅಗತ್ಯವಾದ ಶಕ್ತಿ ದೊರೆತು, ಇಡೀ ದಿನ ಉಲ್ಲಾಸದಿಂದ ಇರಲು ನೆರವಾಗುತ್ತದೆ.
ಬೆಲ್ಲದಲ್ಲಿ ಹೇರಳವಾದ ಕಬ್ಬಿಣಾಂಶ ಇರುವುದರಿಂದ ಹಿಮೋಗ್ಲೋಬಿನ್ ಉತ್ಪತ್ತಿಗೆ ನೆರವಾಗುತ್ತದೆ. ಮುಖ್ಯವಾಗಿ ಮಹಿಳೆಯರಲ್ಲಿ ರಕ್ತಹೀನತೆ ಸಮಸ್ಯೆಯನ್ನು ನಿವಾರಿಸಲು ಬೆಲ್ಲ ಒಳ್ಳೆಯದು
ಬೆಲ್ಲ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿ ಸುಸ್ತು, ನಿಶ್ಯಕ್ತಿಯನ್ನು ನಿವಾರಿಸುತ್ತದೆ.
ಕಫ, ಅಸ್ತಮಾ ಸಮಸ್ಯೆ ಇದ್ದವರಿಗೆ ಪ್ರತಿದಿನ ಬೆಲ್ಲ ಸೇವನೆ ಉಪಯುಕ್ತವಾಗಿದೆ. ಉಸಿರಾಟದ ಮಾರ್ಗ ಕಟ್ಟದಂತೆ ತಡೆಯಲು ಬೆಲ್ಲ ಸಹಾಯ ಮಾಡುತ್ತದೆ
ಬೆಲ್ಲ ದೇಹದಲ್ಲಿ ಚಯಾಪಚಯ ಕ್ರಿಯೆಯನ್ನು ಚುರುಕುಗೊಳಿಸುತ್ತದೆ. ಜತೆಗೆ ರಕ್ತವನ್ನು ಶುದ್ಧಿಗೊಳಿಸುತ್ತದೆ
ನಿಯಮಿತ ಬೆಲ್ಲದ ಸೇವನೆಯು ದೇಹದ ತೂಕವನ್ನು ಕಾಪಾಡಿಕೊಳ್ಳಲು ಮತ್ತು ಆರೋಗ್ಯಯುತವಾಗಿ ತೂಕ ಹೆಚ್ಚಿಸಿಕೊಳ್ಳಲು ಸಹಾಯ ಮಾಡುತ್ತದೆ.
ಪ್ರತಿದಿನ ಬೆಲ್ಲವನ್ನು ಸೇವಿಸುವುದರಿಂದ ರಕ್ತ ಶುದ್ಧವಾಗುತ್ತದೆ. ಇದರಿಂದಾಗಿ ಚರ್ಮದ ಆರೋಗ್ಯ ಉತ್ತಮವಾಗುತ್ತದೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.