ಪ್ರಜಾವಾಣಿ ವೆಬ್ ಡೆಸ್ಕ್
ನೆಲ್ಲಿಕಾಯಿಯು ವಿಟಮಿನ್–ಸಿ ಸಹಿತ ಅಧಿಕ ಪೋಷಕಾಂಶವನ್ನು ಹೊಂದಿದೆ
ನೆಲ್ಲಿಕಾಯಿಯನ್ನು ಜಜ್ಜಿ ಪುಡಿ ಮಾಡಿ ಕೂದಲಿಗೆ ಹಚ್ಚುವುದರಿಂದ, ಕೂದಲು ಉದುರುವಿಕೆಯನ್ನು ತಡೆಗಟ್ಟಲು, ಕೂದಲನ್ನು ಬುಡದಿಂದ ಗಟ್ಟಿಯಾಗಿಸಲು, ತಲೆ ಹೊಟ್ಟನು ನಿಯಂತ್ರಿಸಲು ಸಹಕರಿಸುತ್ತದೆ. ನೆಲ್ಲಿಕಾಯಿಯಲ್ಲಿ ಟ್ಯಾನಿನ್ ಅಂಶವಿರುವುದರಿಂದ ಕೂದಲಿಗೆ ಹಾನಿಯಾಗುವುದನ್ನು ತಪ್ಪಿಸಬಹುದು ಎನ್ನುತ್ತಾರೆ ತಜ್ಞರು
ನೆಲ್ಲಿಕಾಯಿಯು ವಿಟಮಿನ್ ಸಿ ಹೊಂದಿದೆ. ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಇದನ್ನು ಸೇವಿಸುವುದರಿಂದ ರೋಗ ನೀರೋಧಕ ಶಕ್ತಿ ಹೆಚ್ಚಿಸಿ ಆಗಾಗ ಕಾಡುವ ಶೀತ, ಜ್ವರ, ಕೆಮ್ಮನ್ನು ನಿಯಂತ್ರಿಸಲು ಸಾಧ್ಯ
ಪ್ರತಿದಿನ ನಿಯಮಿತವಾಗಿ ನೆಲ್ಲಿಕಾಯಿಯನ್ನು ಸೇವನೆ ಮಾಡುವುದರಿಂದ ಜೀರ್ಣ ಕ್ರಿಯೆಗೂ ಸಹಕಾರಿ
ನೆಲ್ಲಿಕಾಯಿ ಸೇವನೆಯು ದೇಹದಲ್ಲಿನ ಅನಗತ್ಯವಾದ ಕೊಲೆಸ್ಟ್ರಾಲ್ ತಡೆಗಟ್ಟಲು ಸಹಕಾರಿ
ಪ್ರತಿನಿತ್ಯ ನೆಲ್ಲಿಕಾಯಿಯನ್ನು ಸೇವಿಸುವುದರಿಂದ ಮಧುಮೇಹವನ್ನೂ ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು.
ನೆಲ್ಲಿಕಾಯಿ ಸೇವನೆಯು ಕಣ್ಣಿನ ಆರೋಗ್ಯಕ್ಕೂ ಉಪಯುಕ್ತ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.