Today's Top 10 News: ಈ ದಿನದ ಪ್ರಮುಖ ಸುದ್ದಿಗಳು

ಪ್ರಜಾವಾಣಿ ವೆಬ್‌ ಡೆಸ್ಕ್‌ 

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೇವೆ ಒದಗಿಸುವ ‘ಶಕ್ತಿ’ ಯೋಜನೆಗೆ ಭಾನುವಾರ ಚಾಲನೆ ನೀಡಿದರು.

ಅಚಲ ಸಂಕಲ್ಪದೊಂದಿಗೆ ಮುನ್ನಡೆಯುತ್ತಿರುವ ಭಾರತಕ್ಕೆ ಸೇವೆ ಸಲ್ಲಿಸಲು ನನಗೆ ಹೆಮ್ಮೆಯಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಹೇಳಿದ್ದಾರೆ.

‘ವಿರೋಧಿ ಶಕ್ತಿಗಳ ತೀವ್ರ ಪ್ರತಿರೋಧದ ನಡುವೆಯೂ ಭಾರತ ಶಕ್ತಿಶಾಲಿ ರಾಷ್ಟ್ರವಾಗಿ ಹೊರಹೊಮ್ಮಿದೆ’ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್ಎಸ್‌) ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ತಿಳಿಸಿದರು.

ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯದಲ್ಲಿ ಭಾರತ ವಿರುದ್ಧ 209 ರನ್ ಅಂತರದ ಗೆಲುವು ದಾಖಲಿಸಿರುವ ಆಸ್ಟ್ರೇಲಿಯಾ, ಟ್ರೋಫಿ ಮುಡಿಗೇರಿಸಿಕೊಂಡಿದೆ.

‘ಬಿಜೆಪಿಯು ಉದ್ಧವ್‌ ಠಾಕ್ರೆ ಅವರಿಗೆ ಭಯಪಡುತ್ತಿದೆ. ಇದು ಒಳ್ಳೆಯ ವಿಷಯ’ ಎಂದು ಶಿವಸೇನಾ ಉದ್ಧವ್‌ ಠಾಕ್ರೆ ಬಣದ ಸಂಸದ ಸಂಜಯ್‌ ರಾವುತ್‌ ಭಾನುವಾರ ಹೇಳಿದ್ದಾರೆ.

ಬಾಲೇಶ್ವರ ರೈಲು ಅಪಘಾತ ನಡೆದು ಭಾನುವಾರಕ್ಕೆ 10 ದಿನ ಕಳೆದಿದೆ. ಈ ಹಿನ್ನೆಲೆಯಲ್ಲಿ ಬಹನಾಗಾದಲ್ಲಿ ಭಾನುವಾರ ಗ್ರಾಮದ ಜನರು ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳುವಂತೆ ಮತ್ತು ದುರಂತದಲ್ಲಿ ಪ್ರಾಣ ಕಳೆದುಕೊಂಡ 288 ಜನರ ಮುಕ್ತಿಗೆ ‌ಸಾಮೂಹಿಕ ಪ್ರಾರ್ಥನೆ ನಡೆಸಿದರು.

‘ಇನ್ನು ಮುಂದೆ ಮಹಿಳೆಯರು ತಮ್ಮ ಮೇಲೆ ನಡೆಯುತ್ತಿರುವ ಲೈಂಗಿಕ ದೌರ್ಜನ್ಯವನ್ನು ಕ್ಯಾಮೆರಾದಲ್ಲಿ ಸೆರೆ ಹಿಡಿದುಕೊಂಡಿರಬೇಕು ಅಥವಾ ವಿಡಿಯೊ ರೆಕಾರ್ಡ್‌ ಮಾಡಿಕೊಳ್ಳುವುದಕ್ಕೆಂದೆ ಒಬ್ಬರನ್ನು ನೇಮಿಸಿಕೊಂಡಿರಬೇಕು‘ ಎಂದು ರಾಜ್ಯಸಭಾ ಸಂಸದ ಕಪಿಲ್‌ ಸಿಬಲ್ ದೆಹಲಿ ಪೊಲೀಸ್‌ ನಡೆ ವಿರುದ್ಧ ಕಿಡಿಕಾರಿದ್ದಾರೆ.

ಮತ್ತೊಮ್ಮೆ ಭಾರತಕ್ಕೆ ಭೇಟಿ ನೀಡುವ ಇಂಗಿತವನ್ನು ವ್ಯಕ್ತಪಡಿಸಿರುವ 'ಟ್ರಿಪಲ್‌ ಎಕ್ಸ್‌' ಖ್ಯಾತಿಯ ಹಾಲಿವುಡ್‌ ನಟ ವಿನ್‌ ಡೀಸೆಲ್‌, 'ನನ್ನನ್ನು ಭಾರತಕ್ಕೆ ಕರೆತಂದದ್ದು ದೀಪಿಕಾ ಪಡುಕೋಣೆ' ಎಂದು ಹೇಳಿದ್ದಾರೆ.

ಕೆನಡಾದಲ್ಲಿ ಗಡಿಪಾರು ಭೀತಿ ಎದುರಿಸುತ್ತಿದ್ದ ಭಾರತೀಯ ವಿದ್ಯಾರ್ಥಿಗಳು ಸದ್ಯ ನಿರಾಳರಾಗಿದ್ದು, ಕೆನಡಾದ ಆಡಳಿತದಿಂದ ಗಡಿಪಾರು ವಿರುದ್ಧ ತಡೆಯಾಜ್ಞೆ ಆದೇಶವನ್ನು ಪಡೆದಿದ್ದಾರೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

‘ಮಧ್ಯಪ್ರದೇಶದಲ್ಲಿ ವರ್ಷಾಂತ್ಯಕ್ಕೆ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷವು ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ’ ಎಂದು ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ವಿಶ್ವಾಸ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.