TOP 10 ‌News | ಈ ದಿನದ ಪ್ರಮುಖ 10 ಸುದ್ದಿಗಳು: 25 ಜುಲೈ 2023

​ಪ್ರಜಾವಾಣಿ ವಾರ್ತೆ

ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಏಕಾಂಗಿಯಾಗಿ ಸ್ಪರ್ಧೆ ಮಾಡಲಿದೆ. ಇದರಲ್ಲಿ ಯಾವ ಅನುಮಾನ ಬೇಡ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಹೇಳಿದ್ದಾರೆ.

ಭಯೋತ್ಪಾದಕ ಸಂಘಟನೆ ಇಂಡಿಯನ್‌ ಮುಜಾಹಿದ್ದೀನ್‌ ಹೆಸರಿನಲ್ಲೂ INDIA ಇದೆ ಎಂದು ವಿರೋಧ ಪಕ್ಷಗಳ ಮೈತ್ರಿ ಒಕ್ಕೂಟದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ.

ಅಪಘಾತಗಳಿಂದಾಗಿ ದೇಶದ ಗಮನ ಸೆಳೆದಿದ್ದ ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಕಳೆದ ಒಂದು ತಿಂಗಳಲ್ಲಿ ಅಪಘಾತಗಳ ಸಂಖ್ಯೆ ಕೊಂಚ ಕಡಿಮೆಯಾಗಿದೆ.

ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್ ಪಾಯಿಂಟ್ ಪಟ್ಟಿಯಲ್ಲಿ ಭಾರತ ತಂಡವು ಎರಡನೇ ಸ್ಥಾನಕ್ಕೆ ಇಳಿದಿದೆ.

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು ಮಹತ್ವಾಕಾಂಕ್ಷೆ ಚಂದ್ರಯಾನ–3 ಯೋಜನೆಯ 'ಬಾಹ್ಯಾಕಾಶ ನೌಕೆ'ಯನ್ನು ಭೂಮಿ ಸುತ್ತಲಿನ ಅಂತಿಮ (ಐದನೇ) ಕಕ್ಷೆಗೆ ಸೇರಿಸುವಲ್ಲಿ ಯಶಸ್ವಿಯಾಗಿದೆ.

ಚಂದ್ರಯಾನ 3 ಉಡ್ಡಯನ

ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮತ್ತೊಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ

2022–23ನೆಯ ಹಣಕಾಸು ವರ್ಷಕ್ಕೆ ಪಿ.ಎಫ್‌. ಚಂದಾದಾರರಿಗೆ ಶೇಕಡ 8.15ರಷ್ಟು ಬಡ್ಡಿ ನೀಡುವ ಶಿಫಾರಸಿಗೆ ಕೇಂದ್ರ ಹಣಕಾಸು ಸಚಿವಾಲಯವು ಅನುಮೋದನೆ ನೀಡಿದೆ.

ಭಯೋತ್ಪಾದನೆ ಕೃತ್ಯಕ್ಕೆ ಸಂಚು ರೂಪಿಸಿದ್ದ ಪ್ರಕರಣದ ಪ್ರಮುಖ ಆರೋಪಿ, ಸುಲ್ತಾನ್‌ ಪಾಳ್ಯದ ನಿವಾಸಿ ಜುನೇದ್‌ ಅಹಮ್ಮದ್‌ನ ಪ್ರೇಯಸಿ ಇರುವ ಸ್ಥಳವನ್ನು ಸಿಸಿಬಿ ಪೊಲೀಸರು ಪತ್ತೆ ಮಾಡಿದ್ದಾರೆ. 

ಸ್ಟೂಡೆಂಟ್‌ ಇಸ್ಲಾಮಿಕ್‌ ಮೂವ್‌ಮೆಂಟ್‌ ಆಫ್‌ ಇಂಡಿಯಾ (ಸಿಮಿ) ಸಂಘಟನೆಯ ಮೇಲಿನ ನಿಷೇಧ ಪ್ರಶ್ನಿಸಿ ಸಲ್ಲಿಕೆಯಾಗಿರುವ ಹಲವು ಅರ್ಜಿಗಳ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್‌ ಮಂಗಳವಾರ ನಿರಾಕರಿಸಿದೆ.

ಜ್ಙಾನವಾಪಿ ಮಸೀದಿಯ ವೈಜ್ಞಾನಿಕ ಪರೀಕ್ಷೆಗೆ ಜಿಲ್ಲಾ ನ್ಯಾಯಾಲಯ ನೀಡಿರುವ ಆದೇಶವನ್ನು ಪ್ರಶ್ನಿಸಿ ಅಂಜುಮಾನ್ ಇಂತೆಜಾಮಿಯಾ ಮಸೀದಿ ಸಮಿತಿಯು ಅಲಹಾಬಾದ್ ಹೈಕೋರ್ಟ್ ಮೆಟ್ಟಿಲೇರಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.