Top 10 | ಈ ದಿನದ ಪ್ರಮುಖ 10 ಸುದ್ದಿಗಳು, 15 ಜುಲೈ 2023

ಪ್ರಜಾವಾಣಿ ವೆಬ್‌ ಡೆಸ್ಕ್‌ 

ಮಹತ್ವಾಕಾಂಕ್ಷಿ ‘ಚಂದ್ರಯಾನ–3’ ಕಾರ್ಯಕ್ರಮದಿಂದಾಗಿ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತವು ಜಾಗತಿಕವಾಗಿ ಮುಂಚೂಣಿಯಲ್ಲಿ ನಿಲ್ಲುವಂತಾಗಿದೆ ಎಂಬ ಅಭಿಪ್ರಾಯವನ್ನು ಉದ್ಯಮಿಗಳು ವ್ಯಕ್ತಪಡಿಸಿದ್ದಾರೆ.

ಭಾರತೀಯ ನೌಕಾಪಡೆಗೆ ಹೊಸ ಪೀಳಿಗೆಯ 26 ರಫೇಲ್ ಜೆಟ್‌ಗಳ ಖರೀದಿಗೆ ಕೇಂದ್ರ ಸರ್ಕಾರವು ಅಧಿಕೃತವಾಗಿ ಮುದ್ರೆ ಒತ್ತಿದೆ ಎಂದು ಫ್ರಾನ್ಸ್‌ನ ಫೈಟರ್‌ ಜೆಟ್ ರಫೇಲ್‌ ತಯಾರಿಕಾ ಕಂಪನಿಯಾದ ಡಸಾಲ್ಟ್‌ ಏವಿಯೇಷನ್‌ ಶನಿವಾರ ದೃಢಪಡಿಸಿದೆ.

ಬಿಪೊರ್‌ಜಾಯ್ ಚಂಡಮಾರುತದ ಪರಿಣಾಮವಾಗಿ ಬೆಳೆ ಕಳೆದುಕೊಂಡ ಕಛ್‌ ಹಾಗೂ ಬನಸ್ಕಂಥ ಜಿಲ್ಲೆಯ ರೈತರಿಗಾಗಿ ಗುಜರಾತ್ ಸರ್ಕಾರ ಶನಿವಾರ ₹ 240 ಕೋಟಿ ಪರಿಹಾರ ಘೋಷಿಸಿದೆ.

7 ಸಾವಿರಕ್ಕೂ ಅಧಿಕ ಯಾತ್ರಿಕರನ್ನೊಳಗೊಂಡ ಹೊಸ ತಂಡ ಜಮ್ಮುವಿನ ಅವಳಿ ಮೂಲ ನೆಲೆಗಳಿಂದ ಶನಿವಾರ ಬೆಳಗ್ಗೆ ಅಮರನಾಥ ಯಾತ್ರೆ ಆರಂಭಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಚುನಾವಣೆ ವೇಳೆ ಕಾಂಗ್ರೆಸ್‌ ಘೋಷಣೆ ಮಾಡಿದ್ದ ಗ್ಯಾರಂಟಿಗಳಲ್ಲಿ ಒಂದಾಗಿರುವ ಪ್ರತಿ ಕುಟುಂಬದ ಯಜಮಾನಿಗೆ ಮಾಸಿಕ ₹ 2,000 ನೀಡುವ ‘ಗೃಹ ಲಕ್ಷ್ಮೀ’ ಯೋಜನೆಗೆ ನೋಂದಣಿ ಮಾಡಿಕೊಳ್ಳಲು ಸರ್ಕಾರ ದಿನಾಂಕ ನಿಗದಿ ಮಾಡಿದೆ.

ಮಣಿಪುರದ ಪರಿಸ್ಥಿತಿ ಮತ್ತು ಅದರ ಪರಿಸ್ಥಿತಿಯ ಕುರಿತು ಯುರೋಪ್ ಸಂಸತ್‌ ಚರ್ಚೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ವಾಗ್ದಾಳಿ ನಡೆಸಿದ್ದು, ಈ ಎರಡರ ಬಗ್ಗೆಯೂ ಅವರು ಏಕೆ ಮಾತನಾಡುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ.

ಪಠ್ಯಪುಸ್ತಕ ಪರಿಷ್ಕರಣೆ ವಿಷಯದಲ್ಲಿ ತಜ್ಞರ ಸಲಹೆ ಪಡೆದು ಮುಂದುವರೆಯಲಾಗುತ್ತಿದೆ. ಯಾವುದೇ ಪಕ್ಷದ ಸಿದ್ದಾಂತವನ್ನು ಪಠ್ಯದ ಮೇಲೆ ಹೇರುವುದಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟ ಪಡಿಸಿದ್ದಾರೆ.

ಭಾರತದ ಪ್ರಮುಖ ಆಟಗಾರ್ತಿ ಪಿ.ವಿ.ಸಿಂಧು ಅಮೆರಿಕ ಓಪನ್‌ ಸೂಪರ್‌ 300 ಬ್ಯಾಡ್ಮಿಂಟನ್‌ ಟೂರ್ನಿಯ ಕ್ವಾರ್ಟರ್‌ಫೈನಲ್‌ನಲ್ಲಿ ಹೊರಬಿದ್ದರು. ಆದರೆ ಲಕ್ಷ್ಯ ಸೇನ್‌ ಪುರುಷರ ವಿಭಾಗದಲ್ಲಿ ಸೆಮಿಫೈನಲ್‌ಗೆ ಲಗ್ಗೆಯಿಟ್ಟರು.

'ಮುಖ್ಯಮಂತ್ರಿ ಹುದ್ದೆಯನ್ನೇ ನನಗೆ ಮೀಸಲಿಟ್ಟಿರಬಹುದು. ಈ ಕಾರಣಕ್ಕೆ ಸಚಿವ ಸ್ಥಾನ ನೀಡಿಲ್ಲ' ಎಂದು ಹಳಿಯಾಳ ಶಾಸಕ ಆರ್.ವಿ.ದೇಶಪಾಂಡೆ ಹಾಸ್ಯಭರಿತವಾಗಿ ಹೇಳಿದರು.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ದುಲೀಪ್ ಟ್ರೋಫಿ ಫೈನಲ್‌ ಪಂದ್ಯದಲ್ಲಿ ದಕ್ಷಿಣ ವಲಯ ಕ್ರಿಕೆಟ್‌ ತಂಡವು ಪಶ್ಚಿಮ ವಲಯ ಗೆಲುವಿಗೆ 298 ರನ್‌ ಗುರಿ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.