Top 10 News| ಈ ದಿನದ ಪ್ರಮುಖ 10 ಸುದ್ದಿಗಳು, 18 ಜೂನ್‌

ಪ್ರಜಾವಾಣಿ ವೆಬ್‌ ಡೆಸ್ಕ್‌ 

ಸಾಮಾಜಿಕ ಜಾಲತಾಣದಲ್ಲಿ ಸೆಲೆಬ್ರಿಟಿಗಳು ಇಂದು ವಿಶೇಷ ಪೋಸ್ಟ್‌ಗಳನ್ನು ಹಂಚಿಕೊಳ್ಳುವ ಮೂಲಕ ತಂದೆಯಂದಿರ ದಿನದ ಶುಭಾಶಯ ಕೋರಿದ್ದಾರೆ.
‘ಬಿಜೆಪಿಯವರಿಗೆ ನಿಜವಾಗಿಯೂ ಬಡವರ ಬಗ್ಗೆ ಕಾಳಜಿ ಇದ್ದರೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ತಂದು ಅಕ್ಕಿ ಕೊಡಿಸುವ ಕೆಲಸ ಮಾಡಲಿ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ವಿವಾದಕ್ಕೆ ಗುರಿಯಾಗಿರುವ ‘ಆದಿಪುರುಷ’ ಸಿನಿಮಾದ ಕೆಲವು ಸಂಭಾಷಣೆಗಳನ್ನು ಪರಿಷ್ಕರಿಸಲು ನಿರ್ಮಾಪಕರು ನಿರ್ಧರಿಸಿರುವುದಾಗಿ ಚಿತ್ರದ ಸಂಭಾಷಣಕಾರ ಮನೋಜ್ ಮುಂತಾಶಿರ್ ಶುಕ್ಲಾ ಭಾನುವಾರ ಹೇಳಿದ್ದಾರೆ.
'10 ಕೆ.ಜಿ ಅಕ್ಕಿ ಕೊಡುವ ಗ್ಯಾರಂಟಿ ಅನುಷ್ಠಾನದ ವಿಚಾರದಲ್ಲಿ ಕೇಂದ್ರದ ಕಡೆ ಕೈ ತೋರಿಸುತ್ತಾ ರಾಜ್ಯದ ಕಾಂಗ್ರೆಸ್ ಸರ್ಕಾರ ಸುಖಾ ಸುಮ್ಮನೆ ಗೊಂದಲ ಸೃಷ್ಟಿಸುತ್ತಿದೆ' ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದರು.
‘ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಆಹ್ವಾನಿಸಲು ಶೀಘ್ರ ಅಪ್ಲಿಕೇಷನ್ ಬಿಡುಗಡೆಗೊಳಿಸುತ್ತೇವೆ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವ ಲಕ್ಷ್ಮಿ ಹೆಬ್ಬಾಳಕರ ಹೇಳಿದರು.
ಮನ್ ಕಿ ಬಾತ್ ರೆಡಿಯೊ ಕಾರ್ಯಕ್ರಮದ102ನೇ ಮಾಸಿಕ ಸಂಚಿಕೆಯಲ್ಲಿ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ತುರ್ತು ಪರಿಸ್ಥಿತಿ ಸೇರಿದಂತೆ ಹಲವು ವಿಷಯಗಳ ಬಗ್ಗೆ ಪ್ರಸ್ತಾಪಿಸಿದ್ದಾರೆ.
ಸರ್ಕಾರಿ ಸ್ವಾಮ್ಯದ ಕಂಪನಿಗಳಲ್ಲಿ (ಪಿಎಸ್‌ಯು) ಎರಡು ಲಕ್ಷಕ್ಕೂ ಅಧಿಕ ಉದ್ಯೋಗ ಕಡಿತ ಮಾಡಲಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಸಿಸೇರಿಯನ್ ಮಾಡುವಂತೆ ಮನವಿ ಮಾಡಿಕೊಂಡರೂ, ಮಹಿಳೆಯೊಬ್ಬರಿಗೆ ಸಾಮಾನ್ಯ ಹೆರಿಗೆ ಮಾಡಿಸಿ ಮಗುವಿನ ಅಂಗವೈಕಲ್ಯತೆಗೆ ಕಾರಣವಾದ ಹಾಸನದ ಆಸ್ಪತ್ರೆಗೆ ದಂಡ ಗ್ರಾಹರ ಗ್ರಾಹಕರ ವ್ಯಾಜ್ಯಗಳ ವೇದಿಕೆ ₹15 ಲಕ್ಷ ದಂಡ ವಿಧಿಸಿದೆ.
ಭಾರತ ಕ್ರಿಕೆಟ್‌ ತಂಡದ ಬ್ಯಾಟರ್‌ ಅಜಿಂಕ್ಯ ರಹಾನೆ ಅವರು ವೆಸ್ಟ್ ಇಂಡೀಸ್‌ ಪ್ರವಾಸದ ಬಳಿಕ ಇಂಗ್ಲೆಂಡ್‌ನ ಕೌಂಟಿ ಕ್ರಿಕೆಟ್‌ನಲ್ಲಿ ಲೆಸ್ಟರ್‌ಷೈರ್‌ ತಂಡದ ಪರ ಆಡಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ವಿಶ್ವದ ಎರಡು ಅತಿದೊಡ್ಡ ಆರ್ಥಿಕತೆಗಳಾದ ಅಮೆರಿಕ ಹಾಗೂ ಚೀನಾ ನಡುವೆ ನಿರಂತರ ಸಂಘರ್ಷ ಏರ್ಪಟ್ಟಿದೆ. ಉಭಯ ದೇಶಗಳ ಉದ್ವಿಗ್ನತೆ ಶಮನಕ್ಕೆ ಪ್ರಯತ್ನವೆಂಬಂತೆ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಆ್ಯಂಟನಿ ಬ್ಲಿಂಕೆನ್ ಚೀನಾಕ್ಕೆ ಆಗಮಿಸಿದ್ದಾರೆ.