Top 10 News| ಈ ದಿನದ ಪ್ರಮುಖ 10 ಸುದ್ದಿಗಳು, 19 ಜೂನ್‌ 2023

ಪ್ರಜಾವಾಣಿ ವೆಬ್‌ ಡೆಸ್ಕ್‌ 

ಅನ್ನ ಭಾಗ್ಯ ಯೋಜನೆಗೆ ಬೇಕಾದ 1.50 ಲಕ್ಷ ಟನ್ ಅಕ್ಕಿ ಕೊಡಲು ಛತ್ತೀಸಗಢ ಸರ್ಕಾರ ಒಪ್ಪಿಗೆ ಸೂಚಿಸಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದರು.
ವಿಧಾನಪರಿಷತ್‌ನಲ್ಲಿ ತೆರವಾಗಿರುವ ಮೂರು ಸ್ಥಾನಗಳಿಗೆ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌, ಸಚಿವ ಎ.ಎಸ್‌ ಬೋಸರಾಜು, ತಿಪ್ಪಣ್ಣಪ್ಪ ಕಮಕನೂರು ಅವರ ಹೆಸರನ್ನು ಕಾಂಗ್ರೆಸ್‌ ಅಂತಿಮಗೊಳಿಸಿದೆ.
ತಮಿಳುನಾಡು ರಾಜಧಾನಿ ಚೆನ್ನೈ ಸೇರಿದಂತೆ ಸುತ್ತಮುತ್ತಲಿನ ಕರಾವಳಿ ಪ್ರದೇಶಗಳಲ್ಲಿ ಭಾನುವಾರ ರಾತ್ರಿ ಭಾರಿ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ.
'ಮೋಸ್ಟ್‌ ವಾಂಟೆಡ್‌' ಖಾಲಿಸ್ತಾನಿ ಭಯೋತ್ಪಾದಕ, 'ಖಾಲಿಸ್ತಾನಿ ಟೈಗರ್‌ ಫೋರ್ಸ್‌'ನ ನಾಯಕ ಹರ್ದೀಪ್‌ ಸಿಂಗ್‌ ನಿಜ್ಜರ್‌ನನ್ನು ಕೆನಡಾದಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾಯಿತ ಸರ್ಕಾರವಿಲ್ಲದೆ ಇಂದಿಗೆ (ಜೂ.19) ಐದು ವರ್ಷ ಪೂರ್ಣಗೊಂಡಿದೆ. ಕಣಿವೆಯಲ್ಲಿ ಪ್ರಜಾಪ್ರಭುತ್ವವನ್ನು ಮರುಸ್ಥಾಪಿಸಲು ಕೇಂದ್ರ ಸರ್ಕಾರ ವಿಳಂಬ ಧೋರಣೆ ಅನುಸರಿಸುತ್ತಿದೆ ಎಂದು ಪ್ರಮುಖ ರಾಜಕೀಯ ಪಕ್ಷಗಳು ಕಿಡಿಕಾರಿವೆ.
ಮಣಿಪುರದ ಇಂಫಾಲ್‌ನ ಪಶ್ಚಿಮ ಕಾಂಟೊ ಸಬಲ್‌ ಪ್ರದೇಶದಲ್ಲಿ ಶಸ್ತ್ರಸಜ್ಜಿತ ದುಷ್ಕರ್ಮಿಗಳು ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಸೇನಾ ಸಿಬ್ಬಂದಿಯೊಬ್ಬರು ಗಾಯಗೊಂಡಿದ್ದಾರೆ.
ಹಿರಿಯ ಐಪಿಎಸ್ ಅಧಿಕಾರಿ ರವಿ ಸಿನ್ಹಾ ಅವರನ್ನು ದೇಶದ ಹೊರಗಡೆ ಗೂಢಚರ್ಯೆ ನಡೆಸುವ ಭಾರತದ ‘ರಾ’ ಏಜನ್ಸಿಯ ನೂತನ ಮುಖ್ಯಸ್ಥರನ್ನಾಗಿ ಕೇಂದ್ರ ಸರ್ಕಾರ ನೇಮಿಸಿದೆ.
ತಮಿಳುನಾಡಿನ ಕಡಲೂರು ಜಿಲ್ಲೆಯ ಮೇಲ್ಪಟ್ಟಂಪಕ್ಕಂನಲ್ಲಿ ಎರಡು ಬಸ್‌ಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಏಳು ಮಂದಿ ಮೃತಪಟ್ಟಿದ್ದು, 40 ಮಂದಿ ಗಾಯಗೊಂಡಿದ್ದಾರೆ.
‘2018ರ ನಂತರ ಆಸ್ತಿಗಳ ಮಾರ್ಗಸೂಚಿ ದರ ಪರಿಷ್ಕರಿಸಿಲ್ಲ. ಆದ್ದರಿಂದ, ಶೀಘ್ರ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು’ ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.
ವಿವಾದದ ಸ್ವರೂಪ ಪಡೆದುಕೊಳ್ಳುತ್ತಿರುವ ‘ಆದಿಪುರುಷ’ ಚಿತ್ರವನ್ನು ನೇಪಾಳದಾದ್ಯಂತ ಸ್ಥಗಿತಗೊಳಿಸಲಾಗಿದೆ ಎಂದು ಚಲನಚಿತ್ರ ವಿತರಕ ಮನೋಜ್‌ ರಾಠಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ವಿವಾದಕ್ಕೆ ಗುರಿಯಾಗಿರುವ ‘ಆದಿಪುರುಷ’ ಸಿನಿಮಾದ ಕೆಲವು ಸಂಭಾಷಣೆಗಳನ್ನು ಪರಿಷ್ಕರಿಸಲು ನಿರ್ಮಾಪಕರು ನಿರ್ಧರಿಸಿರುವುದಾಗಿ ಚಿತ್ರದ ಸಂಭಾಷಣಕಾರ ಮನೋಜ್ ಮುಂತಾಶಿರ್ ಶುಕ್ಲಾ ಭಾನುವಾರ ಹೇಳಿದ್ದಾರೆ.