Top 10 News| ಈ ದಿನದ ಪ್ರಮುಖ 10 ಸುದ್ದಿಗಳು, 21 ಜೂನ್‌ 2023

ಪ್ರಜಾವಾಣಿ ವೆಬ್‌ ಡೆಸ್ಕ್‌ 

20ಕ್ಕೂ ಹೆಚ್ಚು ದೇಶಗಳಲ್ಲಿ ‘ಅಂತರರಾಷ್ಟ್ರೀಯ ಯೋಗ ದಿನ‘ ಗೂಗಲ್‌ನಲ್ಲಿ ಟ್ರೆಂಡ್‌ ಆಗಿದೆ.

 ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಬಡವರ ವಿರೋಧಿಯಾಗಿದ್ದು, ಸೇಡಿನ ರಾಜಕಾರಣ ಮಾಡುತ್ತಿದೆ ಎಂದು ಕಾಂಗ್ರೆಸ್‌ ಮುಖಂಡ ಜೈರಾಂ ರಮೇಶ್‌ ಆರೋಪಿಸಿದ್ದಾರೆ.

ಯೋಗವನ್ನು ಜನಪ್ರಿಯಗೊಳಿಸಿದ್ದು ದೇಶದ ಮೊದಲ ಪ್ರಧಾನಮಂತ್ರಿ ಜವಾಹರಲಾಲ್ ನೆಹರೂ ಅವರು ಎಂದು ಕಾಂಗ್ರೆಸ್‌ ಹೇಳಿಕೊಂಡಿದೆ.

ಜವಾಹರಲಾಲ್‌ ನೆಹರೂ

ಬಿಬಿಎಂಪಿ ವ್ಯಾಪ್ತಿಯಲ್ಲಿ ತಡೆ ಹಿಡಿದಿರುವ ಎಲ್ಲ ಕಾಮಗಾರಿಗಳನ್ನೂ ಪರಿಶೀಲಿಸಿದ ಬಳಿಕವೇ ಬಿಲ್ ಪಾವತಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

ಮುಂದಿನ ವರ್ಷ ಭಾರತಕ್ಕೆ ಭೇಟಿ ನೀಡುವ ಯೋಜನೆ ಇದೆ. ಆದಷ್ಟು ಬೇಗ ಟೆಸ್ಲಾ ಭಾರತದಲ್ಲಿ ಕಾರ್ಯಾಚರಣೆ ಆರಂಭಿಸಲಿದೆ ಎನ್ನುವ ವಿಶ್ವಾಸ ನನಗಿದೆ ಎಂದು ಎಲಾನ್‌ ಮಸ್ಕ್‌ ಹೇಳಿದರು

ಬಾಂಬೆ ಷೇರು ವಿನಿಮಯ ಕೇಂದ್ರದ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್‌ ಬುಧವಾರ ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿತು.

ತುಪ್ಪದ ಬೆಡಗಿ ನಟಿ ರಾಗಿಣಿ ಯೋಗ ದಿನದ ಪ್ರಯುಕ್ತ ಯೋಗದ ವಿವಿಧ ಭಂಗಿಗಳ ಫೋಟೊ ಹಂಚಿಕೊಂಡಿದ್ದಾರೆ

 ಜುಲೈ 3 ರಿಂದ ವಿಧಾನಮಂಡಲ ಅಧಿವೇಶನ ಆರಂಭವಾಗಲಿದೆ ಎಂದು ಸ್ಪೀಕರ್‌ ಯು.ಟಿ ಖಾದರ್‌ ಹೇಳಿದ್ದಾರೆ.

ಜಾಗತಿಕ ಮನರಂಜನಾ ಉದ್ದಿಮೆಗೆ ನೀಡಿದ ಕೊಡುಗೆಯನ್ನು ಗುರುತಿಸಿ ಬಾಲಿವುಡ್‌ ಚಿತ್ರ ನಿರ್ದೇಶಕ ಕರಣ್ ಜೋಹರ್‌ ಅವರನ್ನು ಬ್ರಿಟನ್‌ ಸಂಸತ್ತು ಗೌರವಿಸಿದೆ.

ನಟ ಶಿವರಾಜ್‌ಕುಮಾರ್ –ಗೀತಾ ದಂಪತಿ ಇಂದು (ಬುಧವಾರ) ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.