Top 10 |ಈ ದಿನದ ಪ್ರಮುಖ 10 ಸುದ್ದಿಗಳು 16 ಜುಲೈ 2023

ಪ್ರಜಾವಾಣಿ ವೆಬ್‌ ಡೆಸ್ಕ್‌ 

ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಳ್ಳಲು ಹೊರಟಿರುವ ಜೆಡಿಎಸ್‌ಗೆ ಯಾವ ಸಿದ್ದಾಂತವಿದೆ? ಜೆಡಿಎಸ್‌ ಅವಕಾಶವಾದಿ ಪಕ್ಷ, ಅಧಿಕಾರಕ್ಕಾಗಿ ಯಾರ ಜೊತೆಗಾದರೂ ‘ಸೈ’ ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.

'ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಣಿಸಬೇಕೆನ್ನುವ ಏಕೈಕ ಉದ್ದೇಶದಿಂದ ದೇಶದಲ್ಲಿ ಪ್ರತಿಪಕ್ಷಗಳು ಒಂದಾಗುತ್ತಿವೆ. ಸ್ವಂತ ಬಲವಿಲ್ಲದ ಅವರ ಒಕ್ಕೂಟದಿಂದಾಗಲಿ, ಸಭೆಯಿಂದಾಗಲಿ ಯಾವುದೇ ರಾಜಕೀಯ ಲಾಭವಾಗದು' ಎಂದು ಶಾಸಕ ಬಸವರಾಜ ಬೊಮ್ಮಾಯಿ ಹೇಳಿದರು.

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಶೇ 75ಕ್ಕೂ ಹೆಚ್ಚು ಬೋಧಕ ಹುದ್ದೆಗಳು ಖಾಲಿ ಇದ್ದು, ಅತಿಥಿ ಪ್ರಾಧ್ಯಾಪಕರನ್ನು ಅವಲಂಬಿಸಿವೆ.

ವರ್ಷಾಂತ್ಯದಲ್ಲಿ ರಾಜಸ್ಥಾನದ ವಿಧಾನಸಭೆಗೆ ನಡೆಯಲಿರುವ ಚುನಾವಣೆಯ ಗೆಲುವಿನ ಮೇಲೆ ಕಣ್ಣಿಟ್ಟಿರುವ ಕೇಸರಿ ಪಾಳಯವು ಭಾನುವಾರ ಪ್ರಚಾರದ ರಣ ಕಹಳೆ ಮೊಳಗಿಸಿದೆ.

'ರೈತರ ಮಾತನ್ನು ಸೂಕ್ಷ್ಮವಾಗಿ ಆಲಿಸಿ, ಅವರ ದೃಷ್ಟಿಕೋನವನ್ನು ಅರ್ಥ ಮಾಡಿಕೊಂಡರೆ ದೇಶದ ಹಲವು ಸಮಸ್ಯೆಗಳನ್ನು ಪರಿಹರಿಸಬಹುದು. ರೈತರು ಈ ದೇಶದ ಶಕ್ತಿಯಾಗಿದ್ದಾರೆ' ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಅಮರನಾಥ ಯಾತ್ರೆ ಕೈಗೊಂಡಿದ್ದ ಯಾತ್ರಾರ್ಥಿಗಳು ಇಂದು(ಭಾನುವಾರ) ಪ್ರತ್ಯೇಕ ಘಟನೆಗಳಲ್ಲಿ ಇಬ್ಬರೂ ಮೃತಪಟ್ಟಿದ್ದು, ಈ ಯಾತ್ರೆಯಲ್ಲಿ ಮೃತಪಟ್ಟವರ ಸಂಖ್ಯೆ 27ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೇಶದ 500ಕ್ಕೂ ಹೆಚ್ಚು ಕಡೆಗಳಲ್ಲಿ ಬೆಲೆ ಏರಿಕೆ ಪರಿಸ್ಥಿತಿಯ ಮರು ಮೌಲ್ಯಮಾಪನ ನಡೆಸಿದ ನಂತರ, ಇಂದಿನಿಂದ ದೇಶದ ಹಲವೆಡೆ ಕೆ,ಜಿಗೆ ₹80 ನಂತೆ ರಿಯಾಯಿತಿ ದರದಲ್ಲಿ ಟೊಮೆಟೊ ಮಾರಾಟ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ಟ್ವೀಟ್ ಮಾಡಿದೆ.

ಅಮೆರಿಕದ ಅಲಸ್ಕಾದಲ್ಲಿ ಪ್ರಬಲ ಭೂಕಂಪ ಸಂಭವಿಸಿದೆ ಎಂದು ಅಮೆರಿಕದ ಭೂವಿಜ್ಞಾನ ಸರ್ವೇಕ್ಷಣಾ ಇಲಾಖೆ(ಯುಎಸ್‌ಜಿಎಸ್)ತಿಳಿಸಿದೆ. ಭಾನುವಾರ ಮುಂಜಾನೆ ರಿಕ್ಟರ್ ಮಾಪಕದಲ್ಲಿ 7.4 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಅದು ಹೇಳಿದೆ.

ನಟಿ ಕೀರ್ತಿ ಸುರೇಶ್ ಅವರು ಮುಂಬರುವ 'ಕನ್ನಿವೇದಿ' ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ನಟಿ, ‘ ಮುಂದಿನ ಚಿತ್ರ ‘ಕನ್ನಿವೇದಿ‘ಯಲ್ಲಿ ಅಭಿನಯಿಸುತ್ತಿದ್ದೇನೆ, ನಿಮ್ಮೆಲ್ಲರ ಪ್ರೀತಿ ಮತ್ತು ಬೆಂಬಲ ಬೇಕು‘ ಎಂದು ಬರೆದುಕೊಂಡಿದ್ದಾರೆ.

ಕನ್ನಡಿಗ ವಾಸುಕಿ ಕೌಶಿಕ್ ಮತ್ತು ಎಡಗೈ ಸ್ಪಿನ್ನರ್ ಸಾಯಿಕಿಶೋರ್ ಅವರ ಉತ್ತಮ ಬೌಲಿಂಗ್ ಬಲದಿಂದ ದಕ್ಷಿಣ ವಲಯ ಕ್ರಿಕೆಟ್ ತಂಡವು ದುಲೀಪ್ ಟ್ರೋಫಿಯನ್ನು ಗೆದ್ದುಕೊಂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.