TOP 10 ‌News | ಈ ದಿನದ ಪ್ರಮುಖ 10 ಸುದ್ದಿಗಳು; 23 ಜುಲೈ 2023

ಪ್ರಜಾವಾಣಿ ವೆಬ್‌ ಡೆಸ್ಕ್‌ 

ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾನುವಾರ ಮಳೆ ಮುಂದುವರೆದಿದ್ದು ತಗ್ಗು ಪ್ರದೇಶಗಳು ಮುಳುಗಡೆಯಾಗಿವೆ. ನದಿಪಾತ್ರದಲ್ಲಿರುವ ಮನೆಗಳಿಗೆ ನೀರು ನುಗ್ಗಿದೆ.

ದೇಶದಲ್ಲಿ ಕೆಟ್ಟ ವಿಷಯಗಿಂತ 40 ಪಟ್ಟು ಹೆಚ್ಚು ಒಳ್ಳೆಯ ವಿಷಯಗಳ ಬಗ್ಗೆ ಚರ್ಚೆಯಾಗುತ್ತಿದೆ ಎಂದು ಆರ್‌ಆರ್‌ಎಸ್ ಮುಖ್ಯಸ್ಥ ಮೋಹನ್‌ ಭಾಗವತ್‌ ಹೇಳಿದ್ದಾರೆ.

ಟ್ವಿಟರ್ ಬಳಕೆದಾರರು ತಮ್ಮ ಖಾತೆಗಳಿಗೆ ಬ್ಲೂಟಿಕ್‌ ಪಡೆಯುವ ಮೂಲಕ ತಿಂಗಳಲ್ಲಿ ಸಾವಿರಾರು ಡಾಲರ್‌ ಆದಾಯ ಗಳಿಸಬಹುದು ಎಂದು ಟ್ವಿಟರ್ ಮಾಲೀಕ ಎಲಾನ್‌ ಮಸ್ಕ್‌ ಹೇಳಿದ್ದಾರೆ.

ಬಂಡವಾಳ ಮೌಲ್ಯವು ಗರಿಷ್ಠ ಮಟ್ಟದಲ್ಲಿ ಇದ್ದಾಗ ಕೆಲವು ನಕಾರಾತ್ಮಕ ಅಂಶಗಳು ಭಾರಿ ಕುಸಿತಕ್ಕೆ ಕಾರಣವಾಗಬಹುದು ಎಂದು ಜಿಯೋಜಿತ್ ಫೈನಾನ್ಶಿಯಲ್‌ ಸರ್ವಿಸಸ್‌ನ ಮುಖ್ಯ ಹೂಡಿಕೆ ತಜ್ಞ ವಿ.ಕೆ. ವಿಜಯಕುಮಾರ್‌ ತಿಳಿಸಿದ್ದಾರೆ.

ಖೇಲೊ ಇಂಡಿಯಾ ಕ್ರೀಡಾಕೂಟದಲ್ಲಿ ಭಾಗವಹಿಸಲಿರುವ ಮಣಿಪುರ ಕ್ರೀಡಾಪಟುಗಳಿಗೆ ತಮಿಳುನಾಡಿನಲ್ಲಿ ತರಬೇತಿ ಪಡೆದುಕೊಳ್ಳುವಂತೆ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ ಆಹ್ವಾನ ನೀಡಿದ್ದಾರೆ.

ಶ್ರೀಲಂಕಾ ಬ್ಯಾಟರ್ ಲಾಹಿರು ತಿರಿಮನ್ನೆ ಅವರು ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ.

ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್ ಅವರನ್ನು ಅವಹೇಳನ ಮಾಡುವ ರೀತಿಯಲ್ಲಿ ಫ್ಲೆಕ್ಸ್‌ಗಳನ್ನು ಅಳವಡಿಸಿದ ಆರೋಪದಡಿ ಬಿಜೆಪಿ ಮುಖಂಡ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಕಲಬುರಗಿಯಲ್ಲಿ ಎಲ್‌ ಅಂಡ್ ಟಿ ಕಂಪನಿ ಕಟ್ಟಿಸುತ್ತಿರುವ ಓವರ್ ಹೆಡ್ ಟ್ಯಾಂಕ್‌ನ ಬುನಾದಿಯ ಗುಂಡಿಯಲ್ಲಿ ನಿಂತಿದ್ದ ಮಳೆ ನೀರಲ್ಲಿ ಬಿದ್ದು ಇಬ್ಬರು ಬಾಲಕರು ಮೃತಪಟ್ಟಿದ್ದಾರೆ.

ಭಾರತವು ತನ್ನ ಸ್ನೇಹಿರಾಷ್ಟ್ರ ವಿಯೆಟ್ನಾಂಗೆ ಯುದ್ಧ ವಿಮಾನ ‘ಐಎನ್‌ಎಸ್ ಕೃಪಾಣ್’ ಅನ್ನು ಕೊಡುಗೆ ನೀಡಿದೆ.

ದೆಹಲಿಯ ಯಮುನಾ ನದಿಯ ನೀರಿನ ಮಟ್ಟವು ಇಂದು ಮತ್ತೊಮ್ಮೆ ಅಪಾಯದ ಮಟ್ಟವನ್ನು ಮೀರಿದೆ. ಇದರಿಂದಾಗಿ ಪ್ರವಾಹ ಪೀಡಿತ ತಗ್ಗು ಪ್ರದೇಶಗಳಲ್ಲಿ ಕೈಗೊಂಡಿರುವ ಪುನರ್ವಸತಿ ಕಾರ್ಯಾಚರಣೆಯು ವಿಳಂಬವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.