Top 10 ‌| ಈ ದಿನದ ಪ್ರಮುಖ 10 ಸುದ್ದಿಗಳು 17 ಜುಲೈ 2023

ಪ್ರಜಾವಾಣಿ ವೆಬ್‌ ಡೆಸ್ಕ್‌ 

‘ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದರೆ ನಾಡಿಗೆ 'ದರಿದ್ರ ಮತ್ತು ಬರ' ಬರುತ್ತದೆ ಎಂಬ ಪ್ರತೀತಿ ಇದೆ. ಯಾಕೊ ಈಗಲೂ ಅದೇ ವಾತಾವರಣವಿದೆ. ಸರಿಯಾಗಿ ಮಳೆಯೂ ಆಗುತ್ತಿಲ್ಲ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ವ್ಯಂಗ್ಯವಾಡಿದರು.

ವಿಧಾನಸಭೆ ಫಲಿತಾಂಶ ಹೊರಬಿದ್ದು ಎರಡು ತಿಂಗಳು ಕಳೆದು, ಹೊಸ ಸರ್ಕಾರದ ಬಜೆಟ್‌ ಮಂಡನೆ ಮುಗಿದರೂ ಕೂಡ ಇನ್ನೂ ವಿರೋಧ ಪಕ್ಷ ನಾಯಕನ ಆಯ್ಕೆ ಕಗ್ಗಂಟಾಗಿ ಉಳಿದಿದೆ ಎಂದು ಸಚಿವ ಎಂ.ಬಿ. ಪಾಟೀಲ ಟೀಕಿಸಿದ್ದಾರೆ.

ಕುಮಾರಸ್ವಾಮಿಗೆ ನಿಜವಾಗಿಯೂ ಬಿಜೆಪಿ ವಿರುದ್ಧ ಹೋರಾಡುವ ಮನಸ್ಸಿದೆಯೇ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದ್ದಾರೆ. ಪ್ರತ್ಯೇಕವಾಗಿ ಆಹ್ವಾನ ನೀಡುವ ಅಗತ್ಯತೆ ಇಲ್ಲ ಎಂದು ವಿರೋಧ ಪಕ್ಷಗಳ ಸಭೆಗೆ ಜೆಡಿಎಸ್ ಪಕ್ಷಕ್ಕೆ ಆಹ್ವಾನ ನೀಡದಿರುವ ಬಗ್ಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಸ್ಪಷ್ಟನೆ ನೀಡಿದ್ದಾರೆ.

2024ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪರ್ಯಾಯ ಯಾರೂ ಇರುವುದಿಲ್ಲ’ ಎಂದು ಕೇಂದ್ರದ ಮಾಜಿ ಸಚಿವ ಉಪೇಂದ್ರ ಕುಶ್ವಾಹ ಸೋಮವಾರ ಪ್ರತಿಪಾದಿಸಿದ್ದು, ಮೋದಿ ಅವರನ್ನು ಅಧಿಕಾರದಿಂದ ಕೆಳಗಿಳಿಸುವ ಏಕೈಕ ಕಾರ್ಯಸೂಚಿಯಿಂದ ವಿರೋಧಪಕ್ಷಗಳು ಒಂದಾಗುತ್ತಿವೆ ಎಂದು ಹೇಳಿದ್ದಾರೆ.

ಕಳೆದ ಜೂನ್ 23ರಂದು ಪಟ್ನಾದಲ್ಲಿ ವಿರೋಧ ಪಕ್ಷಗಳು ಮೊದಲ ಸಭೆ ನಡೆಸಿದ್ದೆವು ಆ ಸಭೆ ಯಶಸ್ವಿಯಾಗಿತ್ತು. ಇದೀಗ ಮಂದುವರೆದ ಭಾಗವಾಗಿ ಬೆಂಗಳೂರಿನಲ್ಲಿ ಸಭೆ ನಡೆಯುತ್ತಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹೇಳಿದ್ದಾರೆ.

‘ರಾಷ್ಟ್ರ ರಾಜಕಾರಣದ ಕುರಿತು ನನಗೆ ಯಾವುದೇ ಒಲವಿಲ್ಲ. ಎನ್‌ಡಿಎ ಜೊತೆ ಜೆಡಿಎಸ್ ಮೈತ್ರಿ ವಿಚಾರ ಮತ್ತು ಕೇಂದ್ರದಲ್ಲಿ ನನ್ನನ್ನು ಸಚಿವನನ್ನಾಗಿ ಮಾಡು ವಿಚಾರವೂ ಗೊತ್ತಿಲ್ಲ. ವಿರೋಧ ಪಕ್ಷದ ಸ್ಥಾನವೂ ನನಗೆ ಬೇಕಿಲ್ಲ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಹೇಳಿದರು.

ಭೋಪಾಲ್‌ನಿಂದ ದೆಹಲಿಯ ಹಜರತ್ ನಿಜಾಮುದ್ದೀನ್ ಟರ್ಮಿನಲ್‌ಗೆ ಹೋಗುತ್ತಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಪಿಟಿಐ ವರದಿ ಮಾಡಿದೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರವಾಹ ಪರಿಸ್ಥಿತಿ ಸುಧಾರಿಸಿದ್ದು, ಭೈರೋನ್‌ ಮಾರ್ಗ ಸೇರಿದಂತೆ ಕೆಲವು ರಸ್ತೆಗಳನ್ನು ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ ಎಂದು ದೆಹಲಿ ಸಂಚಾರ ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಬಿಡುಗಡೆಗೆ ಸಿದ್ಧವಾಗಿರುವ ತಮ್ಮ ಮುಂದಿನ ಸಿನಿಮಾ 'ಜವಾನ್‌' ಪೋಸ್ಟರ್ ಬಿಡುಗಡೆ ಮಾಡಿರುವ ನಟ ಶಾರುಖ್‌ ಖಾನ್ ಅವರು ನಟಿ ನಯನತಾರಾ ಅವರ ಪಾತ್ರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ತಾಲ್ಲೂಕಿನ ಹಿರೇಕೋಡಿಯ ನಂದಿಪರ್ವತ ಆಶ್ರಮದ ಮುನಿ ಕಾಮಕುಮಾರ ನಂದಿ ಮಹಾರಾಜ ಅವರ ಕೊಲೆ ಆರೋಪಿಗಳನ್ನು ಜುಲೈ 21ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ಚಿಕ್ಕೋಡಿ ತಾಲ್ಲೂಕಿನ ಹಿರೇಕೋಡಿಯ ಜೈನ ಮುನಿ ಕಾಮಕುಮಾರ ನಂದಿ ಮಹಾರಾಜ ಅವರ ಹತ್ಯೆ ಆರೋಪಿಗಳನ್ನು, ಪೊಲೀಸರು ಜೈಲಿನತ್ತ ಕರೆದೊಯ್ದರು.