Top 10 News |ಈ ದಿನದ ಪ್ರಮುಖ 10 ಸುದ್ದಿಗಳು– ಜೂನ್ 7 ಶುಕ್ರವಾರ 2023

ಪ್ರಜಾವಾಣಿ ವಿಶೇಷ

ಸಿಎಂ ಸಿದ್ದರಾಮಯ್ಯನವರಿಂದ 3.27 ಲಕ್ಷ ಕೋಟಿ ಗಾತ್ರದ ಬಜೆಟ್ ಮಂಡನೆ

ಬಜೆಟ್ ಸುದ್ದಿಗಳಿಗೆ Prajavani.net ನೋಡಿ

ಸಿದ್ದರಾಮಯ್ಯ

ಒಡಿಶಾ ರೈಲು ದುರಂತ: ಸಿಬಿಐನಿಂದ ಮೂವರು ರೈಲ್ವೆ ಉದ್ಯೋಗಿಗಳ ಬಂಧನ

ಒಡಿಶಾ ತ್ರಿವಳಿ ರೈಲು ದುರಂತಕ್ಕೆ ಸಂಬಂಧಿಸಿದಂತೆ ಮೂವರು ರೈಲ್ವೆ ಉದ್ಯೋಗಿಗಳನ್ನು ಸಿಬಿಐ ಶುಕ್ರವಾರ ಬಂಧಿಸಿದೆ.

ಒಡಿಶಾ ರೈಲು ದುರಂತ

4 ರಾಜ್ಯಗಳಿಗೆ ಚುನಾವಣಾ ಉಸ್ತುವಾರಿ ನೇಮಿಸಿದ ಬಿಜೆಪಿ: ರಾಜಸ್ಥಾನಕ್ಕೆ ಪ್ರಲ್ಹಾದ ಜೋಶಿ

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ನಾಲ್ಕು ರಾಜ್ಯಗಳಿಗೆ ಉಸ್ತುವಾರಿಗಳನ್ನು ನೇಮಕ ಮಾಡಿರುವ ಬಿಜೆಪಿ, 2024ರ ಲೋಕಸಭೆ ಚುನಾವಣೆಗೂ ಮುನ್ನ ಪ್ರಮುಖ ರಾಜ್ಯಗಳಲ್ಲಿ ಅಧಿಕಾರಕ್ಕೇರಲು ಪಣ ತೊಟ್ಟಿದೆ.

ಪ್ರಹ್ಲಾದ್ ಜೋಶಿ

ಭ್ರಷ್ಟಾಚಾರವನ್ನು ಬಿಟ್ಟು ಕಾಂಗ್ರೆಸ್ ಉಸಿರಾಡಲಾರದು: ನರೇಂದ್ರ ಮೋದಿ ವಾಗ್ದಾಳಿ

ಭ್ರಷ್ಟಾಚಾರ ಕಾಂಗ್ರೆಸ್‌ ಪಕ್ಷದ ಆದರ್ಶವಾಗಿದೆ. ಅದಿಲ್ಲದೆ, ಕಾಂಗ್ರೆಸ್‌ ಉಸಿರಾಡಲಾರದು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಟೀಕಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ | ಪಿಟಿಐ ಚಿತ್ರ

ಹಿರಿಯ IPS ಅಧಿಕಾರಿ ಸಿ. ವಿಜಯಕುಮಾರ್ ತಲೆಗೆ ಗುಂಡು ಹೊಡೆದುಕೊಂಡು ಆತ್ಮಹತ್ಯೆ

ತಮಿಳುನಾಡಿನ ಕೊಯಮತ್ತೂರು ವಲಯದ ಡೆಪ್ಯೂಟಿ ಐಜಿಪಿ ಹಾಗೂ ಹಿರಿಯ ಐಪಿಎಸ್ ಅಧಿಕಾರಿಯಾಗಿದ್ದ ಸಿ. ವಿಜಯಕುಮಾರ್ ಅವರು ತಲೆಗೆ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರಿಗೆ 45 ವರ್ಷ ವಯಸ್ಸಾಗಿತ್ತು.

ಸಿ. ವಿಜಯಕುಮಾರ್

ಕ್ರಿಶ್ಚಿಯನ್ ಅಭಿವೃದ್ಧಿ ನಿಗಮ ಸ್ಥಾಪನೆಗೆ ರಾಜ್ಯ ಬಜೆಟ್‌ನಲ್ಲಿ ₹100 ಕೋಟಿ ಅನುದಾನ

ಕ್ರಿಶ್ಚಿಯನ್ ಅಭಿವೃದ್ಧಿ ನಿಗಮ ಸ್ಥಾಪನೆಗೆ ರಾಜ್ಯ ಬಜೆಟ್‌ನಲ್ಲಿ ₹ 100 ಕೋಟಿ ಅನುದಾನ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

ಸಾಂದರ್ಭಿಕ ಚಿತ್ರ

ಗ್ಯಾರಂಟಿ ಯೋಜನೆ | ಜನರಿಗೆ ಹೊರೆ ಮಾಡಲ್ಲ, ದುಂದು ವೆಚ್ಚಕ್ಕೆ ಕಡಿವಾಣ ಹಾಕ್ತೀವಿ: ಸಿಎಂ

ಕರ್ನಾಟಕದ ಗ್ಯಾರಂಟಿ ಯೋಜನೆಗಳಿಗೆ ಅಗತ್ಯವಿರುವ ಸಂಪನ್ಮೂಲವನ್ನು ನಮ್ಮ ಸರ್ಕಾರವು ಜನರಿಗೆ ಹೆಚ್ಚಿನ ಹೊರೆಯಾಗದಂತೆ ಹೊಂದಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸಭೆಯಲ್ಲಿ ಶುಕ್ರವಾರ 2023–24ನೇ ಸಾಲಿನ ಕರ್ನಾಟಕ ರಾಜ್ಯ ಬಜೆಟ್ ಮಂಡಿಸಿದ ಸಂದರ್ಭ ಅವರು ಈ ಮಾಹಿತಿ ನೀಡಿದರು.

ಸಿಎಂ ಸಿದ್ದರಾಮಯ್ಯ

ಮೋದಿ ಉಪನಾಮ ವಿವಾದ: ರಾಹುಲ್‌ ಗಾಂಧಿ ಅರ್ಜಿ ತಿರಸ್ಕರಿಸಿದ ಗುಜರಾತ್‌ ಹೈಕೋರ್ಟ್‌

‘ಮೋದಿ ಉಪನಾಮ ಹೊಂದಿರುವವರೆಲ್ಲರೂ ಕಳ್ಳರು’ ಎಂದಿದ್ದ ಕ್ರಿಮಿನಲ್‌ ಮಾನಹಾನಿ ಪ್ರಕರಣದಲ್ಲಿ ಕೆಳ ನ್ಯಾಯಾಲಯ ನೀಡಿದ್ದ ಶಿಕ್ಷೆಗೆ ತಡೆ ಕೋರಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಸಲ್ಲಿಸಿದ್ದ ಅರ್ಜಿಯನ್ನು ಗುಜರಾತ್ ಹೈಕೋರ್ಟ್‌ ತಿರಸ್ಕರಿಸಿದೆ.

ಹರಿಯಾಣದಲ್ಲಿ ಅವಿವಾಹಿತರಿಗೆ ಮಾಸಿಕ ₹2750 ಭತ್ಯೆ

ಹರಿಯಾಣ ಸರ್ಕಾರವು ಅವಿವಾಹಿತರಿಗೆ ಮಾಸಿಕ ₹ 2750 ಭತ್ಯೆ ನೀಡುವ ಯೋಜನೆಯನ್ನು ಜಾರಿಗೆ ತಂದಿದೆ.

ನ್ಯಾಯಾಂಗ ನಿಂದನೆ: ಯತಿ ನರಸಿಂಘಾನಂದಗೆ ಸುಪ್ರೀಂ ಕೋರ್ಟ್‌ ನೋಟಿಸ್

ನ್ಯಾಯಾಂಗ ವ್ಯವಸ್ಥೆಯ ವಿರುದ್ಧ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ಶುಕ್ರವಾರ ವಿವಾದಿತ ಸ್ವಾಮೀಜಿ ಯತಿ ನರಸಿಂಘಾನಂದ ಅವರಿಗೆ ನೋಟಿಸ್ ಜಾರಿ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ಸಾಂದರ್ಭಿಕ ಚಿತ್ರ