ಪ್ರಜಾವಾಣಿ ವೆಬ್ ಡೆಸ್ಕ್
ಇತ್ತೀಚೆಗಷ್ಟೇ ಭಾರತಕ್ಕೆ ಭೇಟಿ ನೀಡಿದ್ದ ಫುಟ್‌ಬಾಲ್ ಮಾಂತ್ರಿಕ ಲಯೊನೆಲ್ ಮೆಸ್ಸಿ, ಪ್ರವಾಸದ ಅನುಭವಗಳನ್ನು ಹಂಚಿಕೊಂಡಿದ್ದಾರೆ.
ಮೆಸ್ಸಿ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೊ ಕ್ಲಿಪ್ ಒಂದನ್ನು ಹಂಚಿಕೊಂಡು ಅಡಿ ಬರಹದಲ್ಲಿ 'ಭಾರತದಲ್ಲಿ ಫುಟ್‌ಬಾಲ್‌ಗೆ ಉಜ್ವಲ ಭವಿಷ್ಯವಿದೆ' ಎಂದು ನಾನು ಭಾವಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
ವಿಡಿಯೊ ಕ್ಲಿಪ್‌ನಲ್ಲಿ ಭಾರತೀಯ ಕ್ರಿಕೆಟ್ ಐಕಾನ್ ಸಚಿನ್ ತೆಂಡೂಲ್ಕರ್, ಬಾಲಿವುಡ್ ನಟಿ ಕರೀನಾ ಕಪೂರ್ ಖಾನ್ ಸೇರಿದಂತೆ ಯುವ ಫುಟ್ಬಾಲ್ ಆಟಗಾರರ ದೃಶ್ಯಗಳು ಸೆರೆಯಾಗಿವೆ.
'ಗೋಟ್' (greatest of all time) ಪ್ರವಾಸದ ಭಾಗವಾಗಿ ಮೆಸ್ಸಿ ಕೋಲ್ಕತ್ತದ ಸಾಳ್ವೆಲೇಕ್ ಕ್ರೀಡಾಂಗಣಕ್ಕೆ ಮೊದಲು ಭೇಟಿ ನೀಡಿದ್ದರು. ಆ ಬಳಿಕ ಹೈದರಾಬಾದ್, ಮುಂಬೈ, ದೆಹಲಿಗೆ ಭೇಟಿ ನೀಡಿದ್ದರು.
ಫುಟ್‌ಬಾಲ್ ಮಾಂತ್ರಿಕ ಲಯೊನೆಲ್ ಮೆಸ್ಸಿ ಅವರು ಮಂಗಳವಾರ ವನತಾರ ವನ್ಯಜೀವಿ ಆರೈಕೆ ಮತ್ತು ಸಂರಕ್ಷಣಾ ಕೇಂದ್ರಕ್ಕೆ ಭೇಟಿ ನೀಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.