ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿಗೆ ವಿರೋಧ

ಭಾನುವಾರ, ಜೂನ್ 16, 2019
22 °C

ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿಗೆ ವಿರೋಧ

Published:
Updated:

ಚಾಮರಾಜನಗರ: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಸರ್ಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ಶಾಲೆಗಳನ್ನು (ಎಲ್‌ಕೆಜಿ, ಯುಕೆಜಿ) ತೆರೆಯುತ್ತಿರುವುದಕ್ಕೆ ಅಂಗನವಾಡಿ ನೌಕರರ ಸಂಘ ವಿರೋಧ ವ್ಯಕ್ತಪಡಿಸಿದೆ. 

‘ಈ ನಿರ್ಧಾರವನ್ನು ಖಂಡಿಸಿ ಇದೇ 30ರಂದು ಬೆಂಗಳೂರಿನಲ್ಲಿ ವಿಧಾನಸೌಧ ಚಲೋ ನಡೆಸಲಾಗುವುದು’ ಎಂದು ರಾಜ್ಯ ಅಂಗನವಾಡಿ ನೌಕರರ ಸಂಘದ ಜಿಲ್ಲಾಧ್ಯಕ್ಷೆ ಸುಜಾತ ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಈ ಪ್ರತಿಭಟನೆಯಲ್ಲಿ ಜಿಲ್ಲೆಯಿಂದ 2 ಸಾವಿರಕ್ಕೂ ಹೆಚ್ಚು ಅಂಗನವಾಡಿ ಕಾರ್ಯಕರ್ತೆಯರು ಭಾಗವಹಿಸಲಿದ್ದಾರೆ’ ಎಂದು ಅವರು ಹೇಳಿದರು.

‘ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳನ್ನು ಆರಂಭಿಸಿದರೆ ಅಂಗನವಾಡಿ ಕೇಂದ್ರಕ್ಕೆ ಬರುವ ಮಕ್ಕಳು ಅಲ್ಲಿಗೆ ಪ್ರವೇಶ ಪಡೆಯುತ್ತಾರೆ. ಇದರಿಂದ ರಾಜ್ಯದಲ್ಲಿರುವ ಅಂಗನವಾಡಿ ಕೇಂದ್ರಗಳು ಉಳಿಯುವುದಿಲ್ಲ. ಆದ್ದರಿಂದ ಸರ್ಕಾರ ಹೊರಡಿಸಿರುವ ಆದೇಶವನ್ನು ವಾಪಸ್‌ ಪಡೆದು, ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ಶಾಲೆಗಳನ್ನು ಆರಂಭಿಸಲು ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.

‘ಅಂಗನವಾಡಿ ನೌಕರರಿಗೆ ಈ ಕೆಲಸವನ್ನು ಅಧಿಕೃತವಾಗಿ ವಹಿಸಬೇಕು. ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ತರಬೇತಿ ನೀಡುವ ಮೂಲಕ ಅವರ ಕೌಶಲ ಹೆಚ್ಚಿಸಬೇಕು. ಅಂಗನವಾಡಿ ಕೇಂದ್ರಗಳನ್ನು ಶಿಶುಪಾಲನಾ ಕೇಂದ್ರಗಳಾಗಿ ಪರಿತವರ್ತಿಸಿ ಶಾಲೆಗಳ ಮಾದರಿಯಲ್ಲಿ ಪೂರ್ಣ ಪ್ರಮಾಣದಲ್ಲಿ ನಡೆಸಬೇಕು’ ಎಂದು ಒತ್ತಾಯಿಸಿದರು.

ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಗಮಣಿ, ತಾಲ್ಲೂಕು ಅಧ್ಯಕ್ಷೆ ರೇವಮ್ಮ, ಕಾರ್ಯದರ್ಶಿ ಶಾಹಿದಾ ಬಾನು, ಖಜಾಂಚಿ ಯಶೋದಮ್ಮ ಇದ್ದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !