ಅದ್ಧೂರಿಯಾಗಿ ನಡೆದ ಅಂಥೋಣಿ ವಾರ್ಷಿಕೋತ್ಸವ

ಬುಧವಾರ, ಜೂನ್ 26, 2019
24 °C

ಅದ್ಧೂರಿಯಾಗಿ ನಡೆದ ಅಂಥೋಣಿ ವಾರ್ಷಿಕೋತ್ಸವ

Published:
Updated:
Prajavani

ಕೆ.ಆರ್.ನಗರ: ತಾಲ್ಲೂಕಿನ ಡೋರ್ನಹಳ್ಳಿಯಲ್ಲಿ ಪವಾಡ ಪುರುಷ ಸಂತ ಅಂಥೋಣಿ ಅವರ ವಾರ್ಷಿಕ ಮಹೋತ್ಸವ ಗುರುವಾರ ಅದ್ದೂರಿಯಾಗಿ ನಡೆಯಿತು.

ಧರ್ಮಗುರು ಡಾ.ಆರ್.ಆರೋಗ್ಯಸ್ವಾಮಿ ನೇತೃತ್ವದಲ್ಲಿ ಜೂನ್ 4ರಿಂದ ಆರಂಭವಾಗಿರುವ ವಾರ್ಷಿಕ ಮಹೋತ್ಸವ 10 ದಿನ ನಡೆಯಿತು.

ಹಬ್ಬದ ದಿನ ಗುರುವಾರ ಬೆಳಿಗ್ಗೆ 10ಕ್ಕೆ ಮೈಸೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷ ಡಾ.ಕೆ.ಎ.ವಿಲಿಯಂ, ಬೆಳಿಗ್ಗೆ 11:30ಕ್ಕೆ ಮೈಸೂರು ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ.ಎಂ.ವಿನ್ಸೆಂಟ್, ಸಂಜೆ 5.30ಕ್ಕೆ ಬೆಳ್ತಂಗಡಿ ಧರ್ಮಕ್ಷೇತ್ರದ ಧರ್ಮಾಧ್ಯಕ್ಷ ಡಾ.ಲಾರೆನ್ಸ್ ಮುಕ್ಕುಳಿ ಚರ್ಚ್‌ನಲ್ಲಿ ನಡೆದ ವಿಶೇಷ ಪೂಜೆಯಲ್ಲಿ ಪಾಲ್ಗೊಂಡರು. ಆಶೀರ್ವಾದ, ಆಶೀರ್ವಚನ, ದೇವರ ಸಂದೇಶ ನೀಡಿದರು.

ತಮಿಳುನಾಡು, ಆಂಧ್ರಪ್ರದೇಶ, ಮಹಾರಾಷ್ಟ್ರ, ಕೇರಳ ಸೇರಿದಂತೆ ದೇಶದ ನಾನಾ ರಾಜ್ಯಗಳಿಂದ ಅಪಾರ ಸಂಖ್ಯೆಯ ಭಕ್ತರು ಭೇಟಿ ನೀಡಿದರು. ಯುವಕ–ಯುವತಿಯರೇ ಹೆಚ್ಚಾಗಿ ಭಾಗವಹಿಸಿದ್ದರು. ಚರ್ಚ್ ಬಳಿಯಲ್ಲಿನ ನಾಲೆಯಲ್ಲಿ ಸ್ನಾನ ಮಾಡಿದರು. ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು.

ಕೆಲವು ಭಕ್ತಾದಿಗಳು ಚರ್ಚ್‌ನಲ್ಲಿ ನಡೆದ ಪ್ರಾರ್ಥನೆಯಲ್ಲಿ ಭಾಗವಹಿಸಿದ್ದರೆ, ಇನ್ನೂ ಕೆಲವರಿಗೆ ಸ್ಥಳಾವಕಾಶ ಇಲ್ಲದೇ ಇರುವುದರಿಂದ ಚರ್ಚ್ ಹೊರ ಭಾಗದಲ್ಲಿ ನಿಂತು ಪ್ರಾರ್ಥನೆಯಲ್ಲಿ ತೊಡಗಿದ್ದರು. ಭಕ್ತಾದಿಗಳಿಗಾಗಿ ಪ್ರಸಾದ ವಿನಿಯೋಗ ಏರ್ಪಡಿಸಲಾಗಿತ್ತು. ಸಂಜೆ ಡೋರ್ನಹಳ್ಳಿಯ ಪ್ರಮುಖ ಬೀದಿಗಳಲ್ಲಿ ಅಲಂಕೃತ ತೇರಿನ ಮೆರವಣಿಗೆ ನಡೆಯಿತು. ಮಳೆ ಬಿಡುವು ಕೊಟ್ಟಿದ್ದರಿಂದ ವಾರ್ಷಿಕೋತ್ಸವ ಸುಗಮವಾಗಿ ನಡೆಯಿತು.

ವಾರ್ಷಿಕೋತ್ಸಕ್ಕೆ ದೂರದ ಊರುಗಳಿಂದ ಆಗಮಿಸಿದ ಭಕ್ತಾದಿಗಳ ಅನುಕೂಲಕ್ಕಾಗಿ ಡೋರ್ನಹಳ್ಳಿ ಮಾರ್ಗವಾಗಿ ಹೋಗುವ ಎಲ್ಲ ರೈಲುಗಳನ್ನು ಡೋರ್ನಹಳ್ಳಿ ರೈಲ್ವೆ ನಿಲ್ದಾಣದಲ್ಲಿ ನಿಲ್ಲಿಸುವ ವ್ಯವಸ್ಥೆ ಕಲ್ಪಿಸಲಾಗಿತ್ತು. ಕೆ.ಆರ್.ನಗರ, ಮೈಸೂರು ಸೇರಿದಂತೆ ಎಚ್.ಡಿ.ಕೋಟೆ, ಪಿರಿಯಾಪಟ್ಟಣ, ಹುಣಸೂರು ಡಿಪೋಗಳಿಂದ ಒಟ್ಟಾರೆ 40 ಬಸ್ 300 ಟ್ರಿಪ್ ಸಂಚರಿಸಿದ್ದಾವೆ ಎಂದು ಕೆ.ಆರ್.ನಗರ ಡಿಪೋ ವ್ಯವಸ್ಥಾಪಕರು ‘ಪ್ರಜಾವಾಣಿ’ಗೆ ತಿಳಿಸಿದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !