ಎಂ.ಬಿ.ಪಾಟೀಲ ಘನತೆಗೆ ತಕ್ಕಂತೆ ಮಾತನಾಡಲಿ: ಅಪ್ಪಾಸಾಹೇಬ ಪಟ್ಟಣಶೆಟ್ಟಿ

ಬುಧವಾರ, ಮೇ 22, 2019
29 °C
ವಿಧಾನ ಪರಿಷತ್ ಸದಸ್ಯ ಪ್ರಕಾಶ ರಾಠೋಡ ಕ್ಷಮೆಗೆ ಆಗ್ರಹ

ಎಂ.ಬಿ.ಪಾಟೀಲ ಘನತೆಗೆ ತಕ್ಕಂತೆ ಮಾತನಾಡಲಿ: ಅಪ್ಪಾಸಾಹೇಬ ಪಟ್ಟಣಶೆಟ್ಟಿ

Published:
Updated:

ವಿಜಯಪುರ: ‘ಗೃಹ ಸಚಿವ ಎಂ.ಬಿ.ಪಾಟೀಲ ತಮ್ಮ ಘನತೆಗೆ ತಕ್ಕಂತೆ ಮಾತನಾಡಬೇಕು’ ಎಂದು ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ತಿಳಿಸಿದರು.

‘ರಮೇಶ ಜಿಗಜಿಣಗಿ ಹಿರಿಯರಿದ್ದಾರೆ. ವಿಜಯಪುರಕ್ಕೆ ಏನು ಕೊಡುಗೆ ನೀಡಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿದೆ. ಚುನಾವಣೆಗಾಗಿ ಅವರ ಬಗ್ಗೆ ಲಘುವಾಗಿ ಮಾತನಾಡುವುದು ಪಾಟೀಲಗೆ ಶೋಭೆಯಲ್ಲ’ ಎಂದು ಶನಿವಾರ ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

‘ರಾಷ್ಟ್ರೀಯ ಹೆದ್ದಾರಿಯ ಟೋಲ್ ಪ್ಲಾಜಾ ಸ್ಥಳಾಂತರ, ಭೂ ಸ್ವಾಧೀನ, ಭೂ ಪರಿಹಾರ ನೀಡುವಿಕೆಯಲ್ಲಿ ರಮೇಶ ಜಿಗಜಿಣಗಿ ಭ್ರಷ್ಟಾಚಾರ ನಡೆಸಿದ್ದಾರೆ ಎಂದು ಪ್ರಕಾಶ ರಾಠೋಡ ಆರೋಪಿಸಿದ್ದಾರೆ. ಒಬ್ಬ ಹಿರಿಯ ಅನುಭವಿ ರಾಜಕಾರಣಿಗೆ ಈ ರೀತಿ ಆಧಾರ ರಹಿತ ಆಪಾದನೆ ಮಾಡುತ್ತಿರುವುದು ಸರಿಯಲ್ಲ. ಆರೋಪ ಮಾಡುವ ಮುನ್ನ ತಿಳಿವಳಿಕೆ ಇಟ್ಟುಕೊಂಡು ಮಾತನಾಡಬೇಕು. ಅದನ್ನು ಬಿಟ್ಟು ಸುಳ್ಳು ಆರೋಪ ಮಾಡಿದ್ದು ಸರಿಯಲ್ಲ. ಇದು ಮತದಾರ ಮೇಲೆ ಪರಿಣಾಮ ಬೀರಲಿದ್ದು, ಬಿಜೆಪಿ ಕಾನೂನು ಕ್ರಮ ಜರುಗಿಸಲು ಚಿಂತನೆ ನಡೆಸಿದೆ’ ಎಂದು ತಿಳಿಸಿದರು.

‘ಪ್ರಕಾಶ ರಾಠೋಡ ಐದು ವರ್ಷಕ್ಕೊಮ್ಮೆ ವಿಜಯಪುರಕ್ಕೆ ಬರುತ್ತಾರೆ. ಎರಡು ಬಾರಿ ಸೋತರೂ, ಇನ್ನೂ ಅವರಿಗೆ ಬುದ್ದಿ ಬಂದಿಲ್ಲ. ಜಿಗಜಿಣಗಿ ಹಿರಿಯ ರಾಜಕಾರಣಿ. ಅವರ ಬಗ್ಗೆ ಅವಹೇಳನ ಮಾಡುವುದು ಸರಿಯಲ್ಲ. ಕೂಡಲೇ ಕ್ಷಮೆಯಾಚಿಸಬೇಕು’ ಎಂದು ಒತ್ತಾಯಿಸಿದರು.

ಅರುಣ ಆತಂಕ ಬೇಡ:

‘ರಮೇಶ ಜಿಗಜಿಣಗಿ ಮನೆ ಮುಂದಿನ ರಸ್ತೆ ಮಾಡಿರುವ ನಾವು, ಅವರ ಮನೆ ಮುಂದೆಯೇ ಕಾಲುವೆಗೆ ನೀರು ಹರಿಸಲಿದ್ದೇವೆ’ ಎಂದು ಗೃಹ ಸಚಿವ ಎಂ.ಬಿ.ಪಾಟೀಲ ತಿಳಿಸಿದ್ದಾರೆ.

‘ನೀರಾವರಿ ಯೋಜನೆಗಳು ಬಾರಾಕಮಾನ ಆಗುವುದಿಲ್ಲ. ಆ ರೀತಿ ಆಗಲೂ ನಾನು ಬಿಡುವುದಿಲ್ಲ. ವಿಧಾನ ಪರಿಷತ್ ಸದಸ್ಯ ಅರುಣ ಶಹಾಪುರ, ಯೋಜನೆಗಳು ಪೂರ್ಣಗೊಳ್ಳುವವರೆಗೆ ಆತಂಕಕ್ಕೊಳಗಾಗದೆ, ನೆಮ್ಮದಿಯಿಂದ ಇರಲಿ’ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !